ನಮ್ಮ ಮೈಸೂರ ದಸರಾ 2024

ರೈತ ದಸರಾಗೆ ಚಾಲನೆ: ಗಮನ ಸೆಳೆದ ಎತ್ತಿನಗಾಡಿ, ಬಂಡೂರು ಕುರಿ

ಮೈಸೂರು: ಮೈಸೂರು ದಸರಾ ಸಂಭ್ರಮಕ್ಕೆ ರೈತ ದಸರಾ ಮೆರಗು ನೀಡಿದ್ದು,  ಅರಮನೆಯ ಕೋಟೆ ಆಂಜನೇಯ ಮೈದಾನದಿಂದ ರೈತ ದಸರಾ ಮೆರವಣಿಗೆಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು.

ಬಳಿಕ, ಮೆರವಣಿಗೆಯು ದೇವರಾಜ ಅರಸು ರಸ್ತೆಯ ಮೂಲಕ ಜಿ.ಕೆ ಗ್ರೌಂಡ್ ವರೆಗೂ ಸಾಗಿತ್ತು, ಮೆರವಣೀಗೆ ಉದ್ದಕ್ಕೂ ಸಾವಿರಾರು ಜನರು ಭಾಗವಹಿಸಿ ಸಂಭ್ರಮಿಸಿದರು. ಈ ಬಾರಿ ವಿಶೇಷವಾಗಿ ನಂದಿ ಧ್ವಜ, ನಗಾರಿ ಹಾಗೂ ತಮಟೆ, ವೀರಗಾಸೆ ವಿರಭದ್ರ ನೃತ್ಯ ಖಡ್ಗ ಪ್ರದರ್ಶನ, ಚಿಲಿಪಿಲಿ ಗೊಂಬೆ, ನಾದಸ್ವರ ಪೂಜೆ ಕುಣಿತ. ಜೊತೆಗೆ ಬಂಡೂರು ಕುರಿ, ಎತ್ತಿನ ಗಾಡಿ ಹಾಗೂ  ಹಳ್ಳಿಕಾರ್ ಹಸುಗಳು ಗಮನ ಸೆಳೆದವು.

ಹೊಸ ಹೊಸ ಕೃಷಿ ತಂತ್ರಜ್ಞಾನಗಳಾದ ಡ್ರೋನ್-2 (ಕೃಷಿ ಔಷದ ಸಿಂಪಡಣ ಡ್ರೋನ್), ಕಬ್ಬು ಕಟಾವು ಯಂತ್ರ, ಕಬ್ಬು ನಾಟಿ ಯಂತ್ರ, ಬೂಮ್ ಸ್ಪೇರ್, ಕಂಬೈoಡ್, ಹಾರ್ವೆಸ್ಟರ್, ಮಿನಿ ಕಾರ್ಟ್, ಬಯೋಜಾರ್ ಯಂತ್ರ, ಅರಣ್ಯ ಇಲಾಖೆಯ ಟ್ಯಾಬ್ಲೋ, ತೋಟಗಾರಿಕೆ ಇಲಾಖೆಯ ಟ್ಯಾಬ್ಲೋಗಳಂತಹ ಹೊಸಹೊಸ ತಂತ್ರಜ್ಞಾನಗಳನ್ನು ಪ್ರದರ್ಶಿಸಲಾಯಿತು.

ಬಳಿಕ ಮಾತನಾಡಿದ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಮೈಸೂರೆಂಬ ಪುಣ್ಯ ನೆಲದದಲ್ಲಿ ರೈತ ದಸರಾವನ್ನು ಪ್ರತಿ ವರ್ಷ ಆಯೋಜನೆ ಮಾಡುತ್ತಿದ್ದು, ರೈತ ದಸರಾಕ್ಕೆ ಅಪೂರ್ವವಾದ ಬೆಂಬಲ ದೊರೆಯುತ್ತಿದೆ. ರೈತ ದಸರಾ ಉದ್ಘಾಟನೆಯನ್ನು ಮಾಡುತ್ತಿರುವುದು ವೈಯಕ್ತಿಕವಾಗಿ ಸಂತೋಷವನ್ನು ನೀಡಿದೆ ಎಂದು  ಸಂತಸ ವ್ಯಕ್ತಪಡಿಸಿದರು.

ವಿಶ್ವವಿಖ್ಯಾತ ಮೈಸೂರು ದಸರಾ 400 ವರ್ಷಗಳ ಇತಿಹಾಸವನ್ನು ಹೊಂದಿದೆ. ಇತಿಹಾಸ ಪೂರ್ವಕವಾದಂತಹ ಮಹೋತ್ಸವ ನಮ್ಮ ಮೈಸೂರು ದಸರಾ. ಇದು ರಾಜ್ಯ ಮತ್ತು ರಾಷ್ಟ್ರಕ್ಕೆ ಸೀಮಿತವಾಗಿರದೆ ಅಂತರಾಷ್ಟ್ರೀಯ ಮಟ್ಟದಲ್ಲೂ ವಿವಿಧ ಭಾಷೆಯ ಜನರ ಮನ್ನಣೆಯನ್ನು ಪಡೆದುಕೊಂಡಿದ್ದು, ದಸರಾವನ್ನು ವೀಕ್ಷಿಸಲು ಲಕ್ಷಾಂತರ ಜನರು ಬರುವುದು ಪರಂಪರೆಯಾಗಿದೆ ಎಂದರು.

ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ರೈತರು ಹೊಸ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವುದು ಕಡಿಮೆಯಾಗಿದೆ. ಅದಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರವು 1000 ಕೋಟಿ ಮಿಷನರಿಗೆ ಸಹಾಯಧನ ಹಾಗೂ ಅನುದಾನವನ್ನು ನೀಡುವುದರ ಜೊತೆಗೆ ರೈತರಿಗೆ 1,900 ಕೋಟಿ ವಿಮೆ ನೀಡಿದ್ದಾರೆ. ಅದನ್ನು ಪ್ರತಿಯೊಬ್ಬ ರೈತರು ಸದುಪಯೋಗ ಪಡಿಸಿಕೊಂಡು ದೇಶವನ್ನು ಅಭಿವೃದ್ದಿಯತ್ತ ಸಾಗಿಸುವ ನಿಟ್ಟಿನಲ್ಲಿ ದುಡಿಯಬೇಕು ಎಂದರು.

ಪ್ರತಿಯೊಬ್ಬ ರೈತನಿಗೂ ತಾವು ಬೆಳೆದಂತ ಬೆಳೆಗಳು ಸುರಕ್ಷಿತವಾಗಿ ಕೈಸೇರಬೇಕು ಹಾಗೂ ಯಾವುದೇ ಅನ್ಯಾಯ ಆಗದಂತೆ ಅದಕ್ಕೆ ನ್ಯಾಯಯುತವಾದ ಬೆಲೆ ಸಿಗಬೇಕು. ನಮ್ಮ ಮೊದಲ ಆದ್ಯತೆ ರೈತರೇ ಆಗಿದ್ದು, ರೈತರಿಗೆ ಸಾಲವನ್ನು ನೀಡುವ ಮೂಲಕ ಕೃಷಿಗೆ ಬೇಕಾಗಿರುವಂತಹ ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರದಿಂದ ಸಿದ್ಧವಿದೆ ಎಂದು ತಿಳಿಸಿದರು.

ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆಯ ಸಚಿವರಾದ ಕೆ.ವೆಂಕಟೇಶ್ ಮಾತನಾಡಿ, ರೈತ ದಸರಾ ಎಂಬುದು ಒಂದು ಆತ್ಮೀಯವಾದ ಕಾರ್ಯಕ್ರಮವಾಗಿದ್ದು, ಮನಸ್ಸಿಗೆ ಸಂತೋಷ ಉಂಟು ಮಾಡುವಂತಹ ಅನೇಕ ವಿಚಾರಗಳಿಂದ ಕೂಡಿದೆ ಎಂದು ಹೇಳಿದರು.

ನಮ್ಮಲ್ಲಿ ಹೊಸ ಹೊಸ ತಂತ್ರಜ್ಞಾನಗಳು ಅಭಿವೃದ್ಧಿಯಲ್ಲಿದ್ದರೂ ಅವುಗಳನ್ನು ರೈತರು ಅಳವಡಿಸಿಕೊಳ್ಳುವುದು ಕಡಿಮೆಯಾಗಿದೆ. ಪ್ರತಿಯೊಬ್ಬ ರೈತರು ತಂತ್ರಜ್ಞಾನವನ್ನು ಅಳವಡಿಸಿಕೊಂಡು ಕೃಷಿ ಮಾಡಿದರೆ ಅವರಿಗೆ ಸಹಾಯದ ಜೊತೆಗೆ ಖರ್ಚು ಕಡಿಮೆಯಾಗುತ್ತದೆ. ಇದರಿಂದ ಉತ್ತಮ ಆದಾಯವನ್ನೂ ಪ್ರತಿಯೊಬ್ಬ ರೈತರು ಪಡೆದುಕೊಳ್ಳಬಹುದು. ರೈತರ ಅನೇಕ ಸಮಸ್ಯೆಗಳಿಗೆ ಹೊಸ ಹೊಸ ಯೋಜನೆ ಮೂಲಕ ಸಹಾಯ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತದೆ ಎಂದು ಹೇಳಿದರು.

ರೈತ ದಸರಾ ಸಮಿತಿಯ ಅಧ್ಯಕ್ಷರಾದ ಕರೀಗೌಡ ಮಾತನಾಡಿ, ಅನ್ನ ಇದ್ದರೆ ಮಾತ್ರ ನಮ್ಮ ಪ್ರಾಣ ಉಳಿಯುತ್ತೆ, ಪ್ರಾಣ ಇದ್ದರೆ ನಾವು ಬದುಕುತ್ತೇವೆ ಎಂಬ ನುಡಿಯು ಮಹತ್ವವಾಗಿದ್ದು, ಪ್ರಪಂಚದ ಸಕಲ ಜೀವಿಗಳಿಗೆ ಅನ್ನದಾನ ಮಾಡುತ್ತಿರುವವರು ರೈತರು. ಅವರಿಗೆ ನಾವು ಯಾವಾಗ ಹೆಚ್ಚು ಒತ್ತು ಕೊಡುವುದಿಲ್ಲವೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿಯನ್ನು ಕಾಣಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಪ್ರತಿಯೊಬ್ಬ ರೈತನು ಕೃಷಿಯನ್ನು ಪ್ರಧಾನವಾಗಿ ಅಳವಡಿಸಿಕೊಂಡರೆ ಮಾತ್ರ ಆತ ಕೃಷಿಯಲ್ಲಿ ಯಶಸ್ಸನ್ನು ಕಾಣಲು ಸಾಧ್ಯವಾಗುತ್ತದೆ ಇಲ್ಲವಾದರೆ ಆತ ಕೃಷಿಯಲ್ಲಿ ಮುಂದುವರೆಯಲು ಸಾಧ್ಯವಿಲ್ಲ. ಅದನ್ನು ಅರಿತು ಪ್ರತಿಯೊಬ್ಬ ರೈತನು ಕೃಷಿಯನ್ನು ಗಂಭೀರವಾಗಿ ಪರಿಗಣಿಸಿ ಕೆಲಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ, ಚಾಮುಂಡೇಶ್ವರಿ ವಿದ್ಯುತ್ ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ರೈತ ದಸರಾದ ಉಪಾಧ್ಯಕ್ಷರಾದ ಜಾಕಿರ್ ಹುಸೇನ್, ಶಿವಕುಮಾರ್, ಮಂಜುನಾಥ್ ಹೆಚ್.ಎಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago