ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಹಿರಿಯ ಮತ್ತು ಪ್ರತಿಷ್ಠೆಯಾದ ಕೆಆರ್‌ಎಸ್ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರತಿರೂಪ ಮಾದರಿ ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರದರ್ಶನಗೊಳ್ಳುತ್ತಿರುವುದು ವಿಶೇಷವೆನಿಸಿದೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಮಂಡ್ಯ ಜಿಲ್ಲೆಯಿಂದ ಪ್ರತಿ ವರ್ಷ ಒಂದೊಂದು ಸ್ತಬ್ಧಚಿತ್ರ ಸಿದ್ಧಪಡಿಸಿ ಕಳುಹಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಈ ವರ್ಷ ಕೆಆರ್‌ಎಸ್ ಜಲಾಶಯ ಮತ್ತು ರಂಗನತಿಟ್ಟು ಪಕ್ಷಿಧಾಮದ ಮಾದರಿಯನ್ನು ಒಂದೇ ಸ್ತಬ್ಧಚಿತ್ರದಲ್ಲಿ ನಿರ್ಮಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ನಾಳೆ ಜಂಬೂಸವಾರಿ ಮೆರವಣಿಗೆಯಲ್ಲಿ ಈ ಸ್ತಬ್ಧಚಿತ್ರ ಸಾಗಲಿದೆ.
ಪ್ರವಾಸಿಗರಿಗೆ ಪರಿಚಯಿಸುವ ಉದ್ದೇಶದಿಂದ ಈ ಸ್ತಬ್ಧಚಿತ್ರ ತಯಾರು ಮಾಡಲಾಗಿದ್ದು, ಇದರಿಂದ ರಂಗನತಿಟ್ಟು ಪಕ್ಷಿಧಾಮಕ್ಕೆ ಇನ್ನೂ ಹೆಚ್ಚಿನ ಪ್ರವಾಸಿಗರು ಬರುವ ನಿರೀಕ್ಷೆಯಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…