Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ದಸರಾ ಆಹಾರ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಆಹಾರ ಮೇಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಾರಾಜ ಕಾಲೇಜು ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ದಸರಾ ಆಹಾರ ಮೇಳ ಉದ್ಘಾಟನೆ ನೆರವೇರಿಸಿದರು.

ಆಹಾರ ಮೇಳದಲ್ಲಿ ಈ ಬಾರಿ ಸ್ಥಳೀಯ, ದೇಶಿ, ವಿದೇಶಿ, ಸಾಂಪ್ರದಾಯಿಕ ಸೇರಿದಂತೆ ಎಲ್ಲಾ ಭಾಗದ ಆಹಾರಗಳನ್ನು ತಯಾರು ಮಾಡಿ ಮಾರಾಟ ಮಾಡಲು ಅವಕಾಶ ಮಾಡಲಾಗಿದೆ.

ಆಹಾರ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಆಹಾರ ಇಲಾಖೆ ಸಚಿವ ಮುನಿಯಪ್ಪ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

Tags: