ನಮ್ಮ ಮೈಸೂರ ದಸರಾ 2024

ದಸರಾ ಸಂಭ್ರಮದಲ್ಲಿ ಮೈಸೂರಿನ ಪ್ರಸಿದ್ಧ ನಾಡ ಕುಸ್ತಿ ಪಂದ್ಯಾವಳಿಗೆ ಚಾಲನೆ

ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ  ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ, ದಸರಾ ಕುಸ್ತಿ ಪಂದ್ಯಾವಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ಚಾಲನೆ ನೀಡಿದರು.

ನಂತರದಲ್ಲಿ ದೊಡ್ಡಕರೆ ಮೈದಾನ ಆವರಣದ  ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ದಾವಣಗೆರೆ ಕ್ರೀಡಾನಿಲಯದ ಪೈಲ್ವಾನ್ ರಾಘವೇಂದ್ರ ಮತ್ತು ಮೈಸೂರಿನ ಮಹದೇವಪುರ ಪೈಲ್ವಾನ್ ವಿಕಾಶ್ ಅವರ ಭುಜ ತಟ್ಟುವ ಮೂಲಕ ಕುಸ್ತಿ ಪಂದ್ಯಾವಳಿಗೆ ವಿದ್ಯುಕ್ತ ಚಾಲನೆ ನೀಡಿದರು.

ಬಾಲಕಿಯರ ಮೊದಲ ಎರಡು ಕುಸ್ತಿ ಪಂದ್ಯದಲ್ಲಿ ಮಂಡ್ಯ ಪೈ.ಸುಹಾನ ಬಾನು ವಿರುದ್ಧ ಗಾಣಿಗನಕೊಪ್ಪಲು ಪೈ.ನಂದಿನಿ ಹಾಗೂ ಮಳವಳ್ಳಿ ಪೈ.ಎಂ.ಕೆ.ಮೋನಿಕಾ ವಿರುದ್ಧ ರಮ್ಮನಹಳ್ಳಿ ಪೈ.ಯಶಸ್ವಿನಿ ಜಯಬೇರಿ ಬಾರಿಸಿದರು. ಈ ಬಾರಿ ದಸರಾ ಮಹೋತ್ಸವದಲ್ಲಿ ಕುಸ್ತಿ ಪಂದ್ಯಾವಳಿ ಅಭಿಮಾನಿಗಳಿಗೆ ರೋಮಾಂಚನ ನೀಡಿತು.

ಈ ಸಂದರ್ಭದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಗ್ಯಾರಂಟಿ ಯೋಜನೆ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಗುಣರಂಜನ್ ಶೆಟ್ಟಿ, ದಸರಾ ಕುಸ್ತಿ ಉಪಸಮಿತಿ ಉಪ ವಿಶೇಷಾಧಿಕಾರಿ ಎಲ್.ನಾಗೇಶ್, ಕಾರ್ಯಾಧ್ಯಕ್ಷ ಡಾ.ಎನ್.ಸಿ.ವೆಂಕಟರಾಜು, ಕಾರ್ಯದರ್ಶಿ ಬಿ.ಎಸ್.ರಘು ಮತ್ತಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಕ್ರಮವಾಗಿ ಕೇರಳಕ್ಕೆ ಜಾನುವಾರು ಸಾಗಾಟ: ಇಬ್ಬರ ಬಂಧನ

ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ…

13 mins ago

ವಿಶೇಷ ಚೇತನರಿಗೆ ಗುಡ್‌ನ್ಯೂಸ್‌: ಶಿಕ್ಷಣ ಉದ್ಯೋಗಕ್ಕೆ ಹೊಸ ನೀತಿ

ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ…

14 mins ago

ಹೈಕೋರ್ಟ್‌ಗೆ ಎರಡು ವಾರ ಚಳಿಗಾಲದ ರಜೆ: ಜನವರಿ.5ರಿಂದ ಕಲಾಪ ಪುನಾರಂಭ

ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.‌20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…

1 hour ago

ಮಾಜಿ ಸಚಿವ ಕೆ.ಎನ್‌ ರಾಜಣ್ಣ ಭೇಟಿ ಮಾಡಿದ ಡಿಸಿಎಂ

ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…

1 hour ago

ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂದೆ ರೀಲ್ಸ್‌ ಪ್ರಕರಣ: ಮಹಿಳೆ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…

2 hours ago

ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…

2 hours ago