ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆ ಆರಂಭಾಗಿದೆ.
ಶನಿವಾರ(ಆ.12)ಮಧ್ಯಾಹ್ನ ಶುಭ ಲಗ್ನದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಸಿಎಂ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪರ್ಚನೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಅರಮನೆ ಅಂಗಳದಿಂದ ಬನ್ನಿಮಂಟಪದವರೆಗೆ ಸಾಗುತ್ತಿರುವ ಮೆರವಣಿಗೆಯಲ್ಲಿ ಚಾಮುಂಡಿ ವಿಗ್ರಹವಿರು 750ಕೆ.ಜಿ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಆನೆ ರಾಜ ಗಾಂಭೀರ್ಯದಿಂದ ಹೆಜ್ಜೆ ಹಾಕಿದನು. ಇತರೆ 9 ಆನೆಗಳು ಅಭಿಮನ್ಯುವಿಗ ಸಾಥ್ ನೀಡಿದವು.
ಮೆರವಣಿಗೆಯಲ್ಲಿ ವಿವಿಧ ಜಿಲ್ಲೆಗಳ ಸ್ತಬ್ಧಚಿತ್ರಗಳು ಗಮನ ಸೆಳೆಯುತ್ತಿವೆ. ನಂದಿ ಕುಣಿತ, ವೀರಗಾಸೆ, ಗಾರುಡಿ ಗೊಂಬೆ ಕುಣಿತ, ನೃತ್ಯಗಳು ಕಳೆಗಟ್ಟಿತು.
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆಗೆ ಮೈಸೂರು ನಗರ ನವ ವಧುವಿನಂತೆ ಸಿಂಗಾರಗೊಂಡಿತ್ತು. ಜೊತೆಗೆ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕಣ್ಗಾವಲು, ಅರಮನೆ ಸೇರಿದಂತೆ ನಗರದಾದ್ಯಂತ ಬಿಗಿ ಭದ್ರೆತೆ ಮಾಡಲಾಗಿದೆ.