ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಅದ್ಧೂರಿ ಚಾಲನೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಚಾಮುಂಡಿಬೆಟ್ಟಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಭೇಟಿ ನೀಡಿ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ನಾಳೆ ಚಾಮುಂಡಿಬೆಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡಹಬ್ಬ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ.
ದಸರಾ ಉದ್ಘಾಟನೆಯ ಹಿನ್ನೆಲೆಯಲ್ಲಿ ದೇವಾಲಯದ ಎಡ ಮತ್ತು ಬಲ ಭಾಗದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ವೇದಿಕೆ ಮುಂಭಾಗ ಸಾರ್ವಜನಿಕರು ಕೂರಲು 3 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅವರು ಬೆಟ್ಟಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ನಾಳಿನ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ದಸರಾ ಉದ್ಘಾಟನೆ ಕಾರ್ಯಕ್ರಮವನ್ನು ಲೈವ್ ಸ್ಟ್ರೀಮ್ ಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.