ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶ ವಿದೇಶಗಳಿಂದ ಲಕ್ಷಾಂತರ ಜನರು ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.
ಈ ನಡುವೆ ವಿಜಯದಶಮಿಯ ಸಂಪ್ರದಾಯಿಕ ಆಚರಣೆಗಳು ಮತ್ತು ಪೂಜೆ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಅರಮನೆ ಅಂಗಳದಲ್ಲಿ ವಿಜಯಯಾತ್ರೆಯ ವಿಧಿ ವಿಧಾನಗಳನ್ನು ನೆರವೇರಿಸಿದರು.
ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ವಜ್ರಮುಷ್ಠಿ ಕಾಳಗ ಮುಗಿದ ನಂತರ ಉತ್ತರ ದಿಕ್ಕಿನಲ್ಲಿರುವ ಭುವನೇಶ್ವರಿ ಅಮ್ಮನವರ ದೇಗುಲಕ್ಕೆ ವಿಜಯಯಾತ್ರೆ ಹೊರಟರು.
ಬಳಿಕ ಬನ್ನಿಮರಕ್ಕೆ ಸಂಪ್ರದಾಯದಂತೆ ವಿಶೇಷ ಪೂಜೆ ಸಲ್ಲಿಸಿ, ಬನ್ನಿ ಮಹಾಕಾಳಿಯಮ್ಮನವರ ಆಶೀರ್ವಾದ ಪಡೆದುಕೊಂಡರು.
ಅಲ್ಲಿಂದ ಹೊರಟ ಯದುವೀರ್ ವಿಜಯಯಾತ್ರೆ ಮುಂದುವರಿಸಿ ಅರಮನೆ ತಲುಪಿದರು. ಈ ಮೂಲಕ ರಾಜಮನೆತನದ ವಿಜಯದಶಮಿಯ ಪೂಜಾ ಕೈಂಕರ್ಯಗಳಿಗೆ ಅಂತಿಮ ತೆರೆಬಿದ್ದಿದೆ.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…