ನಮ್ಮ ಮೈಸೂರ ದಸರಾ 2024

ವೀಕೆಂಡ್‌ ಹಿನ್ನೆಲೆ ಮೈಸೂರಿಗೆ ಹೆಚ್ಚಿದ ಪ್ರವಾಸಿಗರ ಸಂಖ್ಯೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮೈಸೂರಿಗೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆಯಿಟ್ಟಿದ್ದಾರೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಫಲಫುಷ್ಪ ಪ್ರದರ್ಶನ, ಆಹಾರ ಮೇಳ ನೋಡುವುದರ ಜೊತೆ ಜೊತೆಗೆ ಮೈಸೂರು ಅರಮನೆ, ಮೃಗಾಲಯ ಹಾಗೂ ಚಾಮುಂಡಿಬೆಟ್ಟ ನೋಡಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ.

ಇಂದು ಭಾನುವಾರದ ರಜೆ ಇರುವುದರಿಂದ ಮಕ್ಕಳೊಂದಿಗೆ ಮೈಸೂರಿಗೆ ಬಂದಿರುವ ಜನತೆ ಮೈಸೂರಿನಲ್ಲಿ ರೌಂಡ್ಸ್‌ ಹಾಕಿ ಖುಷಿಪಡುತ್ತಿದ್ದಾರೆ.

ಇನ್ನು ಸಂಜೆಯ ವೇಳೆಗೆ ದೀಪಾಲಂಕಾರ ನೋಡಲು ಕೂಡ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಲಿದ್ದು, ಪ್ರಮುಖ ರಸ್ತೆಗಳಲ್ಲಂತೂ ಟ್ರಾಫಿಕ್‌ ಸಮಸ್ಯೆ ಉಂಟಾಗಲಿದೆ.

ಈ ಹಿನ್ನೆಲೆಯಲ್ಲಿ ಸಂಜೆಯ ವೇಳೆಗೆ ಪೊಲೀಸರು ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಿದ್ದು, ಸಂಚಾರಕ್ಕೆ ಅನುವು ಮಾಡಿಕೊಡಲಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

15 mins ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

21 mins ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

36 mins ago

ಗುಂಡ್ಲುಪೇಟೆ: ಬೇರಂಬಾಡಿ ಬಳಿ ಅರಣ್ಯ ಇಲಾಖೆಯಿಂದ ಹುಲಿ ಸೆರೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…

50 mins ago

ಮಂಡ್ಯ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಗ್ರಾಮಸ್ಥರಿಂದ ದೂರು

ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ…

1 hour ago

ನಂಜನಗೂಡಿನಲ್ಲಿ 46 ಮರಗಳ ಹನನ: ಯಶಸ್ವಿಯಾಗಿ ನಡೆದ ಪ್ರತಿಭಟನೆ

ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು…

1 hour ago