ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿಂದು ದಸರಾ ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಯಿತು.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ಸ್ ವ್ಹೇಬ್ರಿಡ್ಜ್‌ನಲ್ಲಿ ನಡೆದ ತೂಕ ಪರೀಕ್ಷೆಯಲ್ಲಿ ಕ್ಯಾಪ್ಟನ್ ಅಭಿಮನ್ಯು ಆನೆ 5820 ಕೆಜಿ ತೂಕವಿದ್ದು, ವರಲಕ್ಷ್ಮೀ 3555, ಭೀಮ 5380, ಏಕಲವ್ಯ 5095, ಲಕ್ಷ್ಮಿ 2625, ರೋಹಿತ್ 3930, ಗೋಪಿ 5280, ಕಂಜನ್ 4725 ಹಾಗೂ ಧನಂಜಯ ಆನೆ 5255 ಕೆಜಿ ತೂಕ ಹೊಂದಿದೆ.
ಇನ್ನು ಎರಡನೇ ತಂಡದಲ್ಲಿ ಮೈಸೂರಿಗೆ ಆಗಮಿಸಿದ ಆನೆಗಳಿಗೂ ಸಹ ತೂಕ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಪ್ರಶಾಂತ ಆನೆ 5240 ಕೆಜಿ ತೂಕವಿದ್ದು, ಹಿರಣ್ಯ ಆನೆ 3160, ಮಹೇಂದ್ರ 5150, ದೊಡ್ಡ ಹರವೆ ಲಕ್ಷ್ಮಿ 3570, ಸುಗ್ರೀವ 5545 ಕೆಜಿ ತೂಕವಿದೆ.
ಒಟ್ಟಾರೆ ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ಆನೆಯೇ ತೂಕದಲ್ಲಿ ಬಲ ಭೀಮನಾಗಿದ್ದು, ವಿಜಯದಶಮಿ ಜಂಬೂಸವಾರಿ ದಿನ ಚಿನ್ನದ ಅಂಬಾರಿ ಹೊತ್ತು ಸಾಗಲು ಸರ್ವ ರೀತಿಯಲ್ಲೂ ಸಜ್ಜಾಗಿದ್ದಾನೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…