Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಖಾಸಗಿ ದರ್ಬಾರ್‌ ಆರಂಭಿಸಿದ ರಾಜವಂಶಸ್ಥ ಯದುವೀರ್‌ ಒಡೆಯರ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಖಾಸಗಿ ದರ್ಬಾರ್‌ ಆರಂಭಿಸಿದ್ದಾರೆ.

ರಾಜಪೋಷಾಕಿನಲ್ಲಿ ಮಿಂಚಿದ ಯದುವೀರ್‌ ಅವರು, ಇಂದು ದರ್ಬಾರ್‌ ಹಾಲ್‌ನಲ್ಲಿ ಸಿಂಹಾಸನದ ಬಳಿ ತೆರಳಿ ಪೂಜೆ ಸಲ್ಲಿಸಿದರು.

ಬಳಿಕ ರತ್ನ ಖಚಿತ ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆ ನೆರವೇರಿಸಿದರು. ಬಳಿಕ ಸಿಂಹಾಸನದ ಮೇಲೆ ಕುಳಿತು ಖಾಸಗಿ ದರ್ಬಾರ್‌ ನಡೆಸಿದರು.

ಇದೇ ವೇಳೆ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್‌ ಅವರು ಯದುವೀರ್‌ ಒಡೆಯರ್‌ರಿಗೆ ಪಾದಪೂಜೆ ಮಾಡಿದರು. ಇದೇ ವೇಳೆ ಯದುವೀರ್‌, ಹಲವು ದೇವಾಲಯಗಳಿಂದ ತಂದಿದ್ದ ಪ್ರಸಾದ ಸ್ವೀಕರಿಸಿದರು.

ಇನ್ನು ಸಂಸದರಾದ ಬಳಿಕ ಯದುವೀರ್‌ ಒಡೆಯರ್‌ ಅವರು ಮೊದಲ ಖಾಸಗಿ ದರ್ಬಾರ್‌ ನಡೆಸುತ್ತಿರುವುದು ಅತ್ಯಂತ ವಿಶೇಷವಾಗಿದೆ. ಜನರ ಜೊತೆ ಬೆರೆತು ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುವುದರ ಜೊತೆಗೆ ಸಂಪ್ರದಾಯಬದ್ಧವಾಗಿ ಬಂದಿರುವ ಆಚರಣೆಗಳನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

Tags: