ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದಾರೆ.
ರಾಜಪೋಷಾಕಿನಲ್ಲಿ ಮಿಂಚಿದ ಯದುವೀರ್ ಅವರು, ಇಂದು ದರ್ಬಾರ್ ಹಾಲ್‌ನಲ್ಲಿ ಸಿಂಹಾಸನದ ಬಳಿ ತೆರಳಿ ಪೂಜೆ ಸಲ್ಲಿಸಿದರು.
ಬಳಿಕ ರತ್ನ ಖಚಿತ ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆ ನೆರವೇರಿಸಿದರು. ಬಳಿಕ ಸಿಂಹಾಸನದ ಮೇಲೆ ಕುಳಿತು ಖಾಸಗಿ ದರ್ಬಾರ್ ನಡೆಸಿದರು.
ಇದೇ ವೇಳೆ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಅವರು ಯದುವೀರ್ ಒಡೆಯರ್‌ರಿಗೆ ಪಾದಪೂಜೆ ಮಾಡಿದರು. ಇದೇ ವೇಳೆ ಯದುವೀರ್, ಹಲವು ದೇವಾಲಯಗಳಿಂದ ತಂದಿದ್ದ ಪ್ರಸಾದ ಸ್ವೀಕರಿಸಿದರು.
ಇನ್ನು ಸಂಸದರಾದ ಬಳಿಕ ಯದುವೀರ್ ಒಡೆಯರ್ ಅವರು ಮೊದಲ ಖಾಸಗಿ ದರ್ಬಾರ್ ನಡೆಸುತ್ತಿರುವುದು ಅತ್ಯಂತ ವಿಶೇಷವಾಗಿದೆ. ಜನರ ಜೊತೆ ಬೆರೆತು ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುವುದರ ಜೊತೆಗೆ ಸಂಪ್ರದಾಯಬದ್ಧವಾಗಿ ಬಂದಿರುವ ಆಚರಣೆಗಳನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…