ಮೈಸೂರು: ರಂಗು ರಂಗಿನ ಯುವ ದಸರೆ ಅದ್ದೂರಿಯಾಗಿ ನೆರವೇರುತ್ತಿದೆ. ಐದು ದಿನ ನಡೆಯುವ ಯುವ ದಸರೆಗೆ ಅನೇಕ ಸೆಲೆಬ್ರಿಟಿಗಳು ಬಂದು ಯುವಕರಿಗೆ ರಂಗಿನ ಜೋಸ್ ನೀಡುತ್ತಿದ್ದಾರೆ. ಅದೇ ರೀತಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಮತ್ತು ತಂಡ ಅ.10 ರಂದು ಸಂಗೀತ ಸುಧೆ ಹರಿಸಲಿದೆ. ಸದ್ಯ, ಈ ಬಗ್ಗೆ ಇಳಯರಾಜ ಅವರು ಸಂತೋಷ ಹಂಚಿಕೊಂಡಿದ್ದು, ಕನ್ನಡದಲ್ಲೀಯೆ ಮಾತನಾಡಿ ಖುಷಿ ಹೊರಹಾಕಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೋ ಸಂದೇಶ ಮೂಲಕ ಮಾತನಾಡಿದ ಅವರು, ಎಲ್ಲರಿಗೂ ನಮಸ್ಕಾರ, ಮೈಸೂರಲ್ಲಿ ದಸರಾ ಕಾರ್ಯಕ್ರಮ ನಡೆಯುತ್ತಿದೆ. ಚಾಮುಂಡಿ ದೇವಿ ಅನುಗ್ರಹದಿಂದ ಕಾರ್ಯಕ್ರಮ ಚೆನ್ನಾಗಿ ನಡೆಯಲಿದೆ ಎಂದು ನಾನು ಭಾವಿಸುತ್ತೇನೆ. ಚಾಮುಂಡಿ ತಾಯಿಯೇ ನನ್ನನ್ನು ಮೈಸೂರಿಗೆ ದಸರಾ ಮಹೋತ್ಸವಕ್ಕೆ ಕರೆಯುತ್ತಿದ್ದಾಳೆ ಎಂದು ನಾನು ಅಂದುಕೊಂಡಿದ್ದೇನೆ. ಅಲ್ಲದೇ ತಾಯಿಯೂ ನನ್ನನ್ನು ಮಾತ್ರವಲ್ಲದೇ ನನ್ನ ತಂಡವನ್ನು ಸಹ ಕರೆಯುತ್ತಿದ್ದಾಳೆ. ಹೀಗಾಗಿ ನಿಮ್ಮನ್ನು ನಾನು ನೋಡಬೇಕು ಎನಿಸುತ್ತಿದೆ. ಆ ಕಾರಣಕ್ಕಾಗಿ ನನ್ನನ್ನು ನೀವು ನೋಡಬೇಕು ಎಂದು ಭಾವಿಸಿದ್ದಾರೆ ನೀವು ಸಹ ಕಾರ್ಯಕ್ರಮಕ್ಕೆ ಬನ್ನಿ ಎಂದು ಕನ್ನಡದಲ್ಲೇ ಮಾತನಾಡಿ ತಮ್ಮ ಖುಷಿ ಹಂಚಿಕೊಂಡಿದ್ದಾರೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಯುವ ದಸರಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದ್ದು, ಹಲವು ಚಿತ್ರರಂಗದ ಗಣ್ಯರು ಭಾಗವಹಿಸಲು ಮೈಸೂರಿಗೆ ಆಗಮಿಸುತ್ತಿದ್ದಾರೆ. ಅದೇ ರೀತಿಯಲ್ಲಿ ಅ.9 ಎ.ಆರ್.ರೆಹಮಾನ್ ನಂತರ ಅ.10 ರಂದು ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಯುವ ದಸರಾ ಸಮಾರಂಭದಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದಾರೆ.
ಬೆಂಗಳೂರು : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7) ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…
ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್…
ಸಾವಿರಾರು ಹೆಜ್ಜೆಗಳೊಂದಿಗೆ ಆರೋಗ್ಯದ ಸಂದೇಶ ಜ.11ರಂದು ನಡೆಯಲಿರುವ ಜಾಗೃತಿ ಅಭಿಯಾನ ಮೈಸೂರು : ಹಲವು ಮೊದಲುಗಳಿಗೆ ನಾಂದಿ ಹಾಡಿರುವ ಸಾಂಸ್ಕೃತಿಕ…
ರಾಂಚಿ : ಉತ್ತರ ಭಾರತವು ತೀವ್ರ ಶೀತಗಾಳಿಗೆ ತತ್ತರಿಸಿದ್ದು, ಭಾರೀ ಹಿಮಪಾತದಿಂದ ಪಟ್ಟಣಗಳು, ದೇವಾಲಯಗಳು ಮತ್ತು ಸುತ್ತಮುತ್ತಲಿನ ಬೆಟ್ಟಗಳು ದಟ್ಟ…
ಸಿದ್ದಾಪುರ : ವಿರಾಜಪೇಟೆ ತಾಲೂಕು ಮಠ ಗ್ರಾಮದಲ್ಲಿ ಬುಧವಾರ ಸಂಜೆ ಹುಲಿಯೊಂದು ಹಾಲು ಕರೆಯುವ ಹಸುವಿನ ಮೇಲೆ ದಾಳಿ ನಡೆಸಿ…
ಹಾವೇರಿ : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ…