Mysore
16
overcast clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಒಲಂಪಿಕ್ಸ್ ಪದಕ ವಿಜೇತರಿಗೆ 6 ಕೋಟಿ ನಗದು ಬಹುಮಾನ : ಸಿಎಂ ಘೋಷಣೆ

ಮೈಸೂರು : ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲು ಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.

ಇದನ್ನೂ ಓದಿ :- https://andolana.in/mysore-dasara-2025/mysuru-dasara-dasara-book-fair-kicks-off/

ವಿನೇಶ್ ಫೋಗಟ್ ಭಾಗಿ ವಿಶೇಷ ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತೆ ಹಾಗೂ ಅಂತರರಾಷ್ಟ್ರೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ ಕ್ರೀಡೆ ಎಂದು ಪರಿಗಣಿಸಲಾಗಿದ್ದ ಕಾಲದಲ್ಲಿ ಸಾಮಾಜಿಕ ಅಡೆತಡೆಗಳು ಮತ್ತು ಹಿನ್ನಡೆಗಳನ್ನು ಅನುಭವಿಸಿದರೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಮೆರೆದ ವಿನೇಶ್ ಅವರು ಹರಿಯಾಣ ರಾಜ್ಯದಲ್ಲಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಕ್ರೀಡಾಪಟುಗಳಿಗೆ ಸರ್ಕಾರದ ನೆರವು ಸರ್ಕಾರ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ. ಮುಂದಿನ ಒಲಿಂಪಿಕ್ಸ್ಗೆ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10.00 ಲಕ್ಷ ಸಹಾಯಧನ ನೀಡಿ ತರಬೇತಿ ನೀಡಲಾಗುವುದು. ಅಲ್ಲದೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕವಿಜೇತ ಕ್ರೀಡಾಪಟುಗಳಿಗೆ ಸರ್ಕಾರ 6 ಕೋಟಿ ರೂ.ಗಳ ನಗದು ಬಹುಮಾನವನ್ನೂ ನೀಡಲಿದೆ. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಒದಗಿಸಲು ಎಲ್ಲ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿಯನ್ನೂ, ಹಾಗೂ ಪೊಲೀಸ್ ಇಲಾಖೆಯಲ್ಲಿ 2 ರಿಂದ ಶೇ.3 ರಷ್ಟು ಕ್ರೀಡಾಮೀಸಲಾತಿಯನ್ನು ನೀಡಲಾಗುತ್ತಿದೆ ಎಂದರು.

ಸದೃಢ ಆರೋಗ್ಯಕ್ಕೆ ಕ್ರೀಡೆ-ವ್ಯಾಯಾಮ ಇಂದಿನ ಯುವಜನತೆ ಶಿಕ್ಷಣ ಹಾಗೂ ಕ್ರೀಡೆಗೆ ಹೆಚ್ಚು ಒತ್ತು ನೀಡಿದರೆ ಅವರ ದೈಹಿಕ ಹಾಗೂ ಮಾನಸಿಕ ವಿಕಸನಕ್ಕೆ ಸಹಕಾರಿಯಾಗಿದೆ. ಸದೃಢ ಆರೋಗ್ಯಕ್ಕೆ ಕ್ರೀಡೆ ಹಾಗೂ ವ್ಯಾಯಾಮ ಅತ್ಯಗತ್ಯ ಎಂದರು.

Tags:
error: Content is protected !!