ನಮ್ಮ ಮೈಸೂರ ದಸರಾ 2025

ಓಲೈಕೆ ರಾಜಕಾರಣದಿಂದ ಲಾಭಕ್ಕಿಂತ ನಷ್ಟವೇ ಜಾಸ್ತಿ: ಸಿಎಂ ಸಿದ್ದರಾಮಯ್ಯ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಹೀಗಿದೆ.

ಈ ದಿನ ದಸರಾ ಮಹೋತ್ಸವವನ್ನು ಬಾನು ಮುಷ್ತಾಕ್‌ ಅವರು ಉದ್ಘಾಟನೆ ಮಾಡಿದ್ದಾರೆ. ನಾವು ಎಲ್ಲರೊಂದಿಗೆ ಪರಸ್ಪರ ಪ್ರೀತಿಯಿಂದ ಇರಬೇಕು. ಪರಸ್ಪರ ದ್ವೇಷದಿಂದ ಇರಬಾರದು. ಅದು ಮನುಷ್ಯತ್ವದ ಲಕ್ಷಣವಲ್ಲ ಎಂದರು.

ಎಲ್ಲರೂ ಇತಿಹಾಸ ತಿಳಿದುಕೊಳ್ಳಬೇಕು. ಎಲ್ಲರೂ ಸಂವಿಧಾನದ ಮಹತ್ವ ತಿಳಿದುಕೊಳ್ಳಬೇಕು. ಯಾರೂ ಕೂಡ ರಾಜಕೀಯ ಮಾಡಬಾರದು. ರಾಜಕೀಯ ಮಾಡುವುದಾದರೂ ಚುನಾವಣೆ ಸಂದರ್ಭದಲ್ಲಿ ಮಾಡಬೇಕು. ಯಾರನ್ನೋ ಓಲೈಕೆಗೋಸ್ಕರ ರಾಜಕಾರಣ ಮಾಡಬಾರದು. ಓಲೈಕೆ ರಾಜಕಾರಣದಿಂದ ನಷ್ಟವೇ ಜಾಸ್ತಿ ಎಂದು ಅಸಮಾಧಾನ ಹೊರಹಾಕಿದರು.

ಲೇಖಕಿ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಮಾಡುವ ಮೂಲಕ ಕನ್ನಡ ನಾಡಿಗೆ ಗೌರವ ತಂದುಕೊಟ್ಟಂತಾಗಿದೆ ಎಂದು ಬಾನು ಮುಷ್ತಾಕ್‌ ಅವರನ್ನು ಹಾಡಿ ಹೊಗಳಿದರು.

ಈ ಬಾರಿ ದಸರಾ ಮಹೋತ್ಸವ 11 ದಿನಗಳ ಕಾಲ ನಡೆಯುತ್ತದೆ. ಈ ಬಾರಿ ವಿಶೇಷವಾಗಿ ದಸರಾ ನಡೆಯಲಿದೆ. ಶಾಸ್ತ್ರೋಕ್ತವಾಗಿಯೇ ನಾವು ದಸರಾ ಮಾಡುತ್ತಿದ್ದೇವೆ. ಈ ಬಾರಿ ಜಂಬೂಸವಾರಿಯಲ್ಲಿ ವಿಶೇಷ ಮೆರುಗು ನೀಡುವ ಕೆಲಸ ಮಾಡುತ್ತಿದ್ದೇವೆ.

ತಾರತಮ್ಯ, ಅಸಮಾನತೆ ಹೋಗಲಾಡಿಸಲೆಂದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಎಲ್ಲಾ ಪಕ್ಷದವರೂ ಗ್ಯಾರಂಟಿ ಯೋಜನೆಗಳನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ತಾರತಮ್ಯ, ಅಸಮಾನತೆಯನ್ನು ಹೋಗಲಾಡಿಸಬೇಕು ಎಂದು ಕರೆ ನೀಡಿದರು.

ಆಂದೋಲನ ಡೆಸ್ಕ್

Recent Posts

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

45 mins ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

2 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

4 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

4 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

5 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

10 hours ago