ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆ ಮಾಡಲು ಶಿಥಿಲ ಕಟ್ಟಡಗಳ ಮೇಲೆ ಹತ್ತಬಾರದು ಎಂದು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಹಾಗೂ ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ದಸರಾ ಮಹೋತ್ಸವವನ್ನು ವ್ಯವಸ್ಥಿತವಾಗಿ ನಡೆಸಲು ಉದ್ದೇಶಿಸಲಾಗಿದೆ ಎಂದರು.
ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಸಿಎಂ, ಡಿಸಿಎಂಗೆ ವಿಶೇಷ ಉಡುಗೊರೆ ರೆಡಿ
ಈ ಬಾರಿ ಕಡ್ಡಾಯವಾಗಿ ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮಕ್ಕೆ ನಿಗದಿತ ಪಾಸ್ ಇರುವವರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಪಾಸ್ ಇಲ್ಲದವರಿಗೆ ಪ್ರವೇಶವಿಲ್ಲ. ಕಾರ್ಯಕ್ರಮಕ್ಕೆ ಬರುವವರು ನಿಗದಿತ ಸ್ಥಳದಲ್ಲೇ ತಮ್ಮ ವಾಹನಗಳನ್ನು ಪಾರ್ಕಿಂಗ್ ಮಾಡಬೇಕು ಎಂದು ಮಾಹಿತಿ ನೀಡಿದರು.
ಇನ್ನು ವಿಜಯದಶಮಿ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಅನೇಕ ಶಿಥಿಲ ಕಟ್ಟಡಗಳಿವೆ. ಅವುಗಳ ಮೇಲೆ ಹತ್ತಬಾರದು. ಆ ಕಟ್ಟಡಗಳ ಮೇಲೆ ಕುಳಿತು ಜಂಬೂಸವಾರಿ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಿದರು.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…