ಹೊಸದಿಲ್ಲಿ : ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.
ಈ ಸಂಬಂಧ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಹಾಗೂ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರ ಅವರ ಪೀಠದ ಮುಂದೆ ಅರ್ಜಿಯ ವಿಚಾರಣೆ ಬಂತು. ಸೆಪ್ಟಂಬರ್ 22ರಂದು ಹಬ್ಬ ಪ್ರಾರಂಭವಾಗುವುದರಿಂದ ತುರ್ತು ವಿಚಾರಣೆಗೆ ಅರ್ಜಿದಾರರು ಕೋರಿದರು. ಇದನ್ನು ಮಾನ್ಯ ಮಾಡಿದ ಸುಪ್ರೀಂ ನಾಳೆ ಅಂದರೆ ಸೆ.19ರಂದು ವಿಚಾರಣಗೆ ಒಪ್ಪಿಗೆ ನೀಡಿದೆ.
ಇದೇ ತಿಂಗಳ 22ರರಂದು ನಡೆಯುವ ದಸರಾ ಉತ್ಸವಕ್ಕೂ ಮುನ್ನ ನಡೆಸುವ ಅಗ್ರ ಪೂಜೆ ನಡೆಸಲು ಹಿಂದೂಯೇತರ ವ್ಯಕ್ತಿಯೊಬ್ಬರಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಹೇಳಿದರು. ಇದಕ್ಕೆ ಸಿಜೆಐ ಒಪ್ಪಿಗೆ ನೀಡಿದರು.
ಬೂಕರ್ ವಿಜೇತೆ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಬಿಜೆಪಿ ನಾಯಕ ಪ್ರತಾಪ ಸಿಂಹ ಸೇರಿದಂತೆ ಹಲವು ಮಂದಿ ಸಲ್ಲಿಸಿದ್ದ ಪಿಐಎಲ್ ಸೆ.15ರಂದು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…