ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾಗೆ ಆಗಮಿಸುವ ನಾಡ ಜನತಗೆ ರೈಲ್ವೆ ಇಲಾಖೆಯಿಂದ ಬಿಗ್ ಗಿಫ್ಟ್ ನೀಡಲಾಗಿದೆ.
ಮೈಸೂರು ದಸರಾ ಮಹೋತ್ಸವವನ್ನು ನೋಡಲು ರಾಜ್ಯ ಹಾಗೂ ಹೊರ ರಾಜ್ಯದಿಂದ ಲಕ್ಷಾಂತರ ಜನರು ಮೈಸೂರಿಗೆ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ ಮೈಸೂರಿಗೆ ಬರುವವರಿಗೆ 51 ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದ್ದು, ಎಂದಿನಂತೆ ಸಂಚರಿಸುವ ರೈಲುಗಳಿಗಿಂತ 51 ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.
ರೈಲ್ವೆ ಇಲಾಖೆ 11 ಅನ್ ರಿಸರ್ವ್ಡ್ ಟ್ರೈನ್‌ಗಳ ವ್ಯವಸ್ಥೆ ಮಾಡಿದ್ದು, ಜನಸಂದಣಿಯ ಅವಶ್ಯಕತೆಗೆ ತಕ್ಕಂತೆ ಬೋಗಿಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ಇದನ್ನು ಓದಿ : Mysuru dasara | ಮೈಸೂರಿಗೆ 610 ವಿಶೇಷ ಬಸ್ ; ದಿನದ ಪ್ರವಾಸಕ್ಕೆ ವಿಶೇಷ ಪ್ಯಾಕೇಜ್
ವಿಜಯಪುರ, ಶಿವಮೊಗ್ಗ, ಧಾರವಾಡ, ಚಾಮರಾಜನಗರ ಹಾಗೂ ತಮಿಳುನಾಡು, ಮಡಗಾಂವ್, ರಾಮನಾಥಪುರಂದಿಂದ ರೈಲಿನ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರ ದರ ಹಾಗೂ ಸಮಯವನ್ನು ಪ್ರತಿ ರೈಲ್ವೆ ನಿಲ್ದಾಣದಲ್ಲಿ ಹಾಕಲಾಗಿರುತ್ತದೆ. ಮಹಿಳೆಯರು, ಮಕ್ಕಳು ಹಾಗೂ ವೃದ್ಧರ ಆರೋಗ್ಯದಲ್ಲಿ ಸಮಸ್ಯೆಯಾದ್ರೆ ಪ್ಲಾಟ್ ಫಾಮ್ 1ರಲ್ಲಿ ಪ್ರತ್ಯೇಕ ಕ್ಲಿನಿಕ್ ವ್ಯವಸ್ಥೆ ಕಲ್ಪಿಸಲಾಗಿದೆ.
ರೈಲ್ವೆ ನಿಲ್ದಾಣದಲ್ಲಿ 150 ಜಿ.ಆರ್.ಪಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, 50 ಸಿಸಿಟಿವಿ ಕ್ಯಾಮರಗಳನ್ನು ಅಳವಡಿಸಲಾಗಿದೆ. ಈ ಕುರಿತು ರೈಲ್ವೆ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರಾದ ಗಿರೀಶ ಧರ್ಮರಾಜ ಕಲಗೊಂಡ ಮಾಹಿತಿ ನೀಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…