ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ದಸರಾ ಗಜಪಡೆ ಹಾಗೂ ಅಶ್ವರೋಹಿ ಪಡೆಗಳಿಗೆ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಯಿತು.
ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ನಡೆದ ಸಿಡಿಮದ್ದು ತಾಲೀಮಿನಲ್ಲಿ ಎಲ್ಲಾ 14 ಆನೆಗಳು, ಅಶ್ವರೋಹಿ ದಳ ಭಾಗಿಯಾಗಿದ್ದವು.
ಮೊದಲಿಗೆ ವಸ್ತು ಪ್ರದರ್ಶನ ಮೈದಾನಕ್ಕೆ ಆಗಮಿಸಿದ ಗಜಪಡೆಗೆ ಪೂರ್ಣಕುಂಭ ಸ್ವಾಗತದ ಮೂಲಕ ವಸ್ತು ಪ್ರದರ್ಶನ ಪ್ರಾಧಿಕಾರವು ವಿಶೇಷ ಪೂಜೆ ಸಲ್ಲಿಸಿ ಬರಮಾಡಿಕೊಂಡಿತು. ಬಳಿಕ ದಸರಾ ಗಜಪಡೆ ಹಾಗೂ ಅಶ್ವರೋಹಿ ದಳ ಸಿಡಿಮದ್ದು ತಾಲೀಮಿನಲ್ಲಿ ಭಾಗಿಯಾಗಿದ್ದವು.
ಇದನ್ನು ಓದಿ: ದಸರಾ ದೀಪಾಲಂಕಾರ, ಡ್ರೋನ್ ಶೋ ಪೋಸ್ಟರ್ ಬಿಡುಗಡೆ
ಇನ್ನು ಇದೇ ಮೊದಲ ಬಾರಿಗೆ ಸಿಡಿಮದ್ದು ತಾಲೀಮಿನಲ್ಲಿ ಭಾಗವಹಿಸಿದ್ದ ಹೇಮಾವತಿ, ರೂಪ ಮತ್ತು ಶ್ರೀಕಂಠ ಆನೆಗಳು ಸಿಡಿಮದ್ದಿನ ಸದ್ದಿಗೆ ಕೊಂಚ ಬೆದರಿದವು.
ಸಿಡಿಮದ್ದು ತಾಲೀಮು ಫೈರಿಂಗ್ ಕಾರ್ಯದಲ್ಲಿ ಸುಮಾರು 30ಕ್ಕೂ ಹೆಚ್ಚು ಸಿಎಆರ್ ಪೊಲೀಸರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಬಿಂದುಮಣಿ, ಸುಂದರರಾಜ್, ಡಿಸಿಎಫ್ ಪ್ರಭುಗೌಡ ಸೇರಿದಂತೆ ಪೊಲೀಸ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಭಾಗಿಯಾಗಿದ್ದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…