ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ವೈಭವದ ಜಂಬೂಸವಾರಿ ಮೆರವಣಿಗೆ ನಡೆಯಲಿದೆ.
ವಿಜಯದಶಮಿ ದಿನವಾದ ಇಂದು ಮಧ್ಯಾಹ್ನ 1 ಗಂಟೆಯಿಂದ 1.18ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಅರಮನೆಯ ಬಲರಾಮದ್ವಾರದ ಬಳಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಾಗುತ್ತದೆ.
ಸಂಜೆ 4.42ರಿಂದ 5.06ರೊಳಗೆ ಜಂಬೂಸವಾರಿಗೆ ಚಾಲನೆ ನೀಡಲಾಗುತ್ತದೆ. ಶುಭ ಕುಂಭಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಗಣ್ಯರು ಸೇರಿದಂತೆ ಲಕ್ಷಾಂತರ ಜನರು ಜಂಬೂಸವಾರಿ ಮೆರವಣಿಗೆ ಕಣ್ತುಂಬಿಕೊಳ್ಳಲು ಕಾತುರರಾಗಿದ್ದಾರೆ.





