ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ: ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಸಿದ್ಧತಾ ಕಾರ್ಯ ಗರಿಗೆದರಿದೆ.

ಅರಮನೆಯಲ್ಲಿ ವಿದ್ಯುತ್‌ ಬಲ್ಬ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯುತ್ ಬಲ್ಬ್‌ಗಳಿರುವ ಅರಮನೆಯಲ್ಲಿ ಬರ್ನ್ ಆದ ಬಲ್ಬ್‌ಗಳನ್ನು ತೆರವುಗೊಳಿಸಿ ಹೊಸ ಬಲ್ಬ್‌ಗಳನ್ನು ಅಳವಡಿಸಲಾಗುತ್ತಿದೆ.

ಇದನ್ನೂ ಓದಿ: ಹುಣಸೂರು ಹೈಟೆಕ್ ಆಸ್ಪತ್ರೆ ಶೀಘ್ರ ಜನಸೇವೆಗೆ : ಶಾಸಕ ಹರೀಶ್‌ಗೌಡ

ಕೆಟ್ಟು ಹೋದ ಸುಮಾರು 16 ಸಾವಿರಕ್ಕೂ ಹೆಚ್ಚು ಬಲ್ಬ್‌ಗಳನ್ನು ತೆರವುಗೊಳಿಸಲಾಗುತ್ತಿದ್ದು, ವೈರಿಂಗ್ ದುರಸ್ತಿ ಕಾರ್ಯ ಆರಂಭವಾಗಿದೆ.

ದೊಡ್ಡ ದೊಡ್ಡ ಕ್ರೇನ್‌ಗಳ ಮೂಲಕ ಮೇಲೇರಿ ದುರಸ್ತಿ ಕಾರ್ಯ ಮಾಡುತ್ತಿದ್ದು, ರಾತ್ರಿ ವೇಳೆ ಅರಮನೆ ಜಗಮಗಿಸುವಂತೆ ಮಾಡಲಾಗುತ್ತದೆ.

ದಸರಾ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಸಿದ್ದತಾ ಕೆಲಸ ಕಾರ್ಯಗಳು ತರಾತುರಿಯಲ್ಲಿ ನಡೆಯುತ್ತಿವೆ.

ಸುಮಾರು 72 ಎಕರೆ ಪ್ರದೇಶದಲ್ಲಿ ವ್ಯಾಪ್ತಿಯಲ್ಲಿರುವ ಅರಮನೆ ಆವರಣ, ಅರಮನೆ ಸುತ್ತಲೂ ಇರುವ ಕಾಂಪೌಂಡ್ ಗೋಡೆ, ಅರಮನೆ ಸೇರಿದಂತೆ ಎಲ್ಲಾ ಕಡೆ ಸುಣ್ಣ, ಬಣ್ಣ ಹೊಡೆಯುವ ಕೆಲಸವೂ ಆರಂಭವಾಗಿದ್ದು, ಮೈಸೂರು ದಸರಾಗೆ ಜಿಲ್ಲಾಡಳಿತ ಸರ್ವ ಸನ್ನದ್ಧವಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

15 mins ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

1 hour ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

2 hours ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

3 hours ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

3 hours ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

4 hours ago