ನಮ್ಮ ಮೈಸೂರ ದಸರಾ 2025

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್‌ಡೌನ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್‌ಡೌನ್‌ ಶುರುವಾಗಿದೆ. ಈ ಬಾರಿ ಅಂಬಾವಿಲಾಸ ಅರಮನೆ ಆವರಣದಲ್ಲಿ 48 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.

ಇನ್ನು ಪಾಸ್‌ ಇದ್ದವರಿಗೆ ಮಾತ್ರ ಅರಮನೆ ಒಳಭಾಗ ಪೊಲೀಸ್‌ ಭದ್ರತೆ ಕೂಡ ಹೆಚ್ಚಳ ಮಾಡಲಾಗಿದೆ. ಸಿಎಂ ಸೇರಿದಂತೆ ಹಲವು ಕ್ಯಾಬಿನೆಟ್‌ ಸಚಿವರು ಕೂಡ ಜಂಬೂಸವಾರಿಯಲ್ಲಿ ಭಾಗಿಯಾಗಲಿದ್ದಾರೆ.

ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು, ರಾಜಮನೆತನದ ಕುಟುಂಬಸ್ಥರು, ನ್ಯಾಯಾಧೀಶರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ.

ಇನ್ನು ಅಂಬಾರಿ ಹೊರುವ ರಾಜಮಾರ್ಗ ಸೇರಿದಂತೆ ನಗರ ವ್ಯಾಪ್ತಿಯಲ್ಲಿ ಹೆಚ್ಚಿನ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

ಅಲ್ಲದೇ ಅಂಬಾರಿ ಸಾಗುವ ಮಾರ್ಗದುದ್ದಕ್ಕು ರಸ್ತೆ ಬದಿ ತಾತ್ಕಾಲಿಕ ತಡೆಗೋಡೆ ನಿರ್ಮಾಣ ಮಾಡಲಾಗಿದ್ದು, ಅಂಬಾರಿ ಸಾಗುವಾಗ ಜನ ದಾಟಿ ರಸ್ತೆಗೆ ಬಾರದಂತೆ ಕ್ರಮ ವಹಿಸಲಾಗಿದೆ.

ಒಟ್ಟಾರೆಯಾಗಿ ಅಂಬಾರಿ ಹೊತ್ತು ಸಾಗುವ ಅಭಿಮನ್ಯು ರಾಜಗಾಂಭೀರ್ಯದೊಂದಿಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದಕ್ಕೂ ಜನ ಕಾತುರದಿಂದ ಕಾಯುತ್ತಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

24 mins ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

34 mins ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

5 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

10 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

10 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

10 hours ago