Drug use confirmed in 189 individuals: Cases registered.
ಮೈಸೂರು : ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಂಗಳವಾರ ಕುರುಬರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟದವರೆಗೆ ನಡೆಯಬೇಕಿದ್ದ ಎರಡು ಪ್ರತ್ಯೇಕ ರ‍್ಯಾಲಿಗಳಿಗೆ ನಗರ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ರಾಜ್ಯ ಸರ್ಕಾರದ ಹಿಂದೂ ವಿರೋಧಿ ನಿಲುವನ್ನು ಹೊಂದಿದೆ ಎಂದು ಹಾಗೂ ಈ ವರ್ಷದ ದಸರಾ ಉತ್ಸವವನ್ನು ಉದ್ಘಾಟಿಸಲು ಹಿರಿಯ ಕನ್ನಡ ಬರಹಗಾರ್ತಿ ಮತ್ತು ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆಯ ಮೈಸೂರು ಜಿಲ್ಲಾ ಘಟಕವು ಮಂಗಳವಾರ ಬೆಳಿಗ್ಗೆ ೭.೩೦ ಕ್ಕೆ ಪಾದಯಾತ್ರೆಯನ್ನು ಯೋಜಿಸಿತ್ತು.
ಇದಕ್ಕೆ ಪ್ರತಿಕ್ರಿಯೆಯಾಗಿ, ದಲಿತ ಮಹಾಸಭಾವು ಬಾನು ಮುಷ್ತಾಕ್ ಅವರನ್ನು ಬೆಂಬಲಿಸಿ ಮೆರವಣಿಗೆಯನ್ನು ಘೋಷಿಸಿತ್ತು. ಎರಡೂ ರ‍್ಯಾಲಿಗಳು ಸೆ.೯ ರಂದು ಬೆಳಿಗ್ಗೆ ೭.೩೦ ಕ್ಕೆ ನಿಗದಿಯಾಗಿದ್ದವು, ಅವುಗಳ ಆರಂಭದ ಸ್ಥಳ ಮತ್ತು ಮಾರ್ಗ ಒಂದೇ ಆಗಿತ್ತು.
ಈ ಸಂಬಂದ ಮಾತನಾಡಿದ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಎರಡೂ ಕಡೆಯವರ ರ‍್ಯಾಲಿಗಳಿಗೆ ಅನುಮತಿ ನಿರಾಕರಿಸಲಾಗಿದೆ. ಕುರುಬರಹಳ್ಳಿ ವೃತ್ತದಲ್ಲಿ ಮತ್ತು ಪ್ರಸ್ತಾವಿತ ರ‍್ಯಾಲಿ ಮಾರ್ಗದಲ್ಲಿ ಭದ್ರತೆಗಾಗಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗುವುದು. ಯಾವುದೇ ಗುಂಪು ತಮ್ಮ ಉದ್ದೇಶಿತ ಮೆರವಣಿಗೆಗಳನ್ನು ನಡೆಸಲು ಅನುಮತಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕುರುಬರಹಳ್ಳಿ ವೃತ್ತ ಮತ್ತು ಚಾಮುಂಡಿ ಬೆಟ್ಟದ ಮಾರ್ಗದಲ್ಲಿ ಮಂಗಳವಾರ ಜನರು ಗುಂಪುಗೂಡದಂತೆ ಎಚ್ಚರಿಕೆ ನಿಡಿರುವ ಅವರು, ಗಲಭೆಗಳನ್ನು ನಡೆಸಲು ಮುಂದಾದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್‌ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…