ನಮ್ಮ ಮೈಸೂರ ದಸರಾ 2025

ದಸರಾ ದೀಪಾಲಂಕಾರ, ಡ್ರೋನ್ ಶೋ ಪೋಸ್ಟರ್ ಬಿಡುಗಡೆ

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ವಿದ್ಯುತ್ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಹಾಗೂ ದೀಪಾಲಂಕಾರದ ಟೀಸರ್ ಬಿಡುಗಡೆಗೊಳಿಸಲಾಯಿತು.

ಅರಮನೆ ಆಡಳಿತ ಮಂಡಳಿ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ವತಿಯಿಂದ ನಡೆಸಲಾಗುವ ದಸರಾ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಬಿಡುಗಡೆಗೊಳಿಸಿ, ಟೀಸರ್ ಅನಾವರಣಗೊಳಿಸಿದರು.

ಎಂದಿನಂತೆ ಈ ಬಾರಿಯೂ ಸೆಸ್ಕ್ ವತಿಯಿಂದ ದೀಪಾಲಂಕಾರ ಮಾಡಲಾಗುತ್ತಿದ್ದು, ನಗರದ 135 ಕಿ.ಮೀ ವ್ಯಾಪ್ತಿಯ ರಸ್ತೆಗಳು ಹಾಗೂ 118 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗುತ್ತಿದೆ. ಅವುಗಳೊಂದಿಗೆ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ಆಕರ್ಷಕ ಪ್ರತಿಕೃತಿಗಳನ್ನು ಇರಿಸಲಾಗುತ್ತದೆ. ದೀಪಾಲಂಕಾರಕ್ಕಾಗಿ 300 ಕಿಲೋ ವ್ಯಾಟ್ ಗಳ, 257520 ಯೂನಿಟ್ ಗಳ ವಿದ್ಯುತ್ ಬಳಕೆ ಮಾಡಲಾಗುತ್ತಿದೆ.

ಆಕರ್ಷಕ ಡ್ರೋನ್ ಶೋ
ದಸರಾ ಮಹೋತ್ಸವದ ಸಂಭ್ರಮಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಡ್ರೋನ್ ಪ್ರದರ್ಶನ ಈ ಬಾರಿ ಮತ್ತಷ್ಟು ಆಕರ್ಷಣೀಯವಾಗಿರಲಿದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆ.28, 29 ಮತ್ತು ಅಕ್ಟೋಬರ್ 1 ಮತ್ತು 2ರಂದು ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದೆ. ಕಳೆದ ಬಾರಿ 1500 ಡ್ರೋನ್ ಬಳಸಿಕೊಂಡು ನಡೆಸಲಾಗಿದ್ದ ಡ್ರೋನ್ ಪ್ರದರ್ಶನದಲ್ಲಿ ಈ ಬಾರಿ 3000 ಸಾವಿರ ಡ್ರೋನ್ ಬಳಸಿಕೊಂಡು ನಡೆಸಲಾಗುತ್ತಿದೆ.

ಅಗತ್ಯ ಸುರಕ್ಷತಾ ಕ್ರಮಗಳು
ಈ ಬಾರಿಯ ದಸರಾ ವಿದ್ಯುತ್ ದೀಪಾಲಂಕಾರದಲ್ಲಿ ಸೆಸ್ಕ್ ವತಿಯಿಂದ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, ಆ ಮೂಲಕ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಪ್ರಮುಖವಾಗಿ ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳುವುದು, ದೀಪಾಲಂಕಾರದ ಕಂಬಗಳ ಹತ್ತಿರ ನಿಂತು ಫೋಟೋ/ವಿಡಿಯೋ ಶೂಟ್‌ ಮಾಡುವುದನ್ನು ತಪ್ಪಿಸುವುದು, ಮಳೆ ಸಂದರ್ಭದಲ್ಲಿ ವಿದ್ಯುತ್‌/ದೀಪಾಲಂಕಾರದ ಕಂಬಗಳ ಹತ್ತಿರ ಹೋಗದೆ ಎಚ್ಚರವಹಿಸುವುದು ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ವಾಹನ ಸವಾರರು ಈ ಬಗ್ಗೆ ನಿಗಾವಹಿಸಿ ಸುರಕ್ಷಿತವಾಗಿ ಸಂಚರಿಸುವಂತೆ ಹಾಗೂ ವಿದ್ಯುತ್‌ ಸಂಬಂಧಿತ ದೂರು/ದೀಪಾಲಂಕಾರದಿಂದ ತೊಂದರೆ ಆದಲ್ಲಿ 24×7 ಸಹಾಯವಾಣಿ 1912 ಸಂಪರ್ಕಿಸುವಂತೆ ಕೋರಲಾಗಿದೆ.

ಈ ಸಂದರ್ಭದಲ್ಲಿ ಶಾಸಕರು ಹಾಗೂ ಸೆಸ್ಕ್ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು, ಜಿಪಂ ಸಿಇಒ ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸೀಫ್, ಸೆಸ್ಕ್ ಅಧೀಕ್ಷಕ ಇಂಜಿನಿಯರ್ ಸುನೀಲ್ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳು ಇದ್ದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

6 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

7 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

8 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

11 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

12 hours ago