ಮೈಸೂರು : ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಯ್ಕೆಗೆ ಆರಂಭದಿಂದಲೂ ತೀವ್ರ ವಿರೋಧ ವ್ಯಕ್ತಪಡಿಸುತ್ತಾ ಬಂದಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಸಮಾಜದ ಶಾಂತಿಗೆ ಭಂಗ ತರುವ ಕೆಲಸ ಮಾಡಿದರೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಎಚ್ಚರಿಕೆ ನೀಡಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅವಕಾಶ ಕೊಡಬಾರದು ಎಂದು ಪ್ರತಾಪ್ ಸಿಂಹ ಅವರು ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ ಎಂದರು.
ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ. ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು ಎಂದರು. ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಶಾಂತಿಭಂಗ ಮಾಡುವ ಕೆಲಸ ಮಾಡಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…