ಮೈಸೂರು: ಸಾಂಸ್ಕೃತಿಕ ನಗರಿ, ಅರಮನೆ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಡಗರ ಮನೆಮಾಡಿದ್ದು, ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ.
ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಹೊತ್ತು ಸಾಗುವ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಜನರ ತುದಿಗಾಲಿನಲ್ಲಿ ನಿಂತಿದ್ದಾರೆ.
ಇದನ್ನು ಓದಿ : ಮೈಸೂರು ದಸರಾ 2025: ಬನ್ನಿಮರಕ್ಕೆ ಪೂಜೆ ಸಲ್ಲಿಸಿದ ರಾಜವಂಶಸ್ಥ ಯದುವೀರ್ ಒಡೆಯರ್
ಇಂದು ಮಧ್ಯಾಹ್ನ 1 ಗಂಟೆ ಒಂದು ನಿಮಿಷದಿಂದ 1 ಗಂಟೆ 16 ನಿಮಿಷಕ್ಕೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಬಳಿಕ ಸಂಜೆ 4.42 ಗಂಟೆಯಿಂದ 5.16ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂಸವಾರಿಗೆ ಚಾಲನೆ ದೊರೆಯಲಿದೆ.
ಕ್ಯಾಪ್ಟನ್ ಅಭಿಮನ್ಯು ಆರನೇ ಬಾರಿಗೆ ಜಂಬೂಸವಾರಿ ಹೊತ್ತು ಬನ್ನಿಮಂಟಪಕ್ಕೆ ಹೊರಡಲು ಸಜ್ಜಾಗಿ ನಿಂತಿದ್ದಾನೆ. ಅಭಿಮನ್ಯುಗೆ ಕುಮ್ಕಿ ಆನೆಗಳಾಗಿ ಕಾವೇರಿ ಹಾಗೂ ರೂಪಾ ಸಾಥ್ ನೀಡಲಿವೆ.
ಈ ಬಾರಿ ಜಂಬೂಸವಾರಿಯಲ್ಲಿ 58 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಲಿವೆ. 100ಕ್ಕೂ ಹೆಚ್ಚು ಕಲಾತಂಡಗಳು, 60ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು, ಅಶ್ವಾರೋಹಿ ದಳ, ಪೊಲೀಸ್ ಬ್ಯಾಂಡ್ ಹಾಗೂ ಪೊಲೀಸ್ ತುಕಡಿಗಳು ಸಾಗಲಿವೆ.





