ನಮ್ಮ ಮೈಸೂರ ದಸರಾ 2025

ಮೈಸೂರಿನಲ್ಲಿ ಕಳೆಗಟ್ಟಿದ ದಸರಾ ವೈಭವ: ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ

ಮೈಸೂರು: ಸಾಂಸ್ಕೃತಿಕ ನಗರಿ, ಅರಮನೆ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಡಗರ ಮನೆಮಾಡಿದ್ದು, ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ.

ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು ಹೊತ್ತು ಸಾಗುವ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಜನರ ತುದಿಗಾಲಿನಲ್ಲಿ ನಿಂತಿದ್ದಾರೆ.

ಇದನ್ನು ಓದಿ :  ಮೈಸೂರು ದಸರಾ 2025: ಬನ್ನಿಮರಕ್ಕೆ ಪೂಜೆ ಸಲ್ಲಿಸಿದ ರಾಜವಂಶಸ್ಥ ಯದುವೀರ್‌ ಒಡೆಯರ್‌

ಇಂದು ಮಧ್ಯಾಹ್ನ 1 ಗಂಟೆ ಒಂದು ನಿಮಿಷದಿಂದ 1 ಗಂಟೆ 16 ನಿಮಿಷಕ್ಕೆ ಸಲ್ಲುವ ಶುಭ ಧನುರ್‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಬಳಿಕ ಸಂಜೆ 4.42 ಗಂಟೆಯಿಂದ 5.16ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂಸವಾರಿಗೆ ಚಾಲನೆ ದೊರೆಯಲಿದೆ.

ಕ್ಯಾಪ್ಟನ್‌ ಅಭಿಮನ್ಯು ಆರನೇ ಬಾರಿಗೆ ಜಂಬೂಸವಾರಿ ಹೊತ್ತು ಬನ್ನಿಮಂಟಪಕ್ಕೆ ಹೊರಡಲು ಸಜ್ಜಾಗಿ ನಿಂತಿದ್ದಾನೆ. ಅಭಿಮನ್ಯುಗೆ ಕುಮ್ಕಿ ಆನೆಗಳಾಗಿ ಕಾವೇರಿ ಹಾಗೂ ರೂಪಾ ಸಾಥ್‌ ನೀಡಲಿವೆ.

ಈ ಬಾರಿ ಜಂಬೂಸವಾರಿಯಲ್ಲಿ 58 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಲಿವೆ. 100ಕ್ಕೂ ಹೆಚ್ಚು ಕಲಾತಂಡಗಳು, 60ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು, ಅಶ್ವಾರೋಹಿ ದಳ, ಪೊಲೀಸ್‌ ಬ್ಯಾಂಡ್‌ ಹಾಗೂ ಪೊಲೀಸ್‌ ತುಕಡಿಗಳು ಸಾಗಲಿವೆ.

ಆಂದೋಲನ ಡೆಸ್ಕ್

Recent Posts

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

9 seconds ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

1 hour ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

7 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

14 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

14 hours ago