ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಅರಮನೆಯಲ್ಲಿ ಸಿಂಹಾಸನ ಜೋಡಣಾ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದವರೆಗೆ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ರಾಜವಂಶಸ್ಥರು ನಡೆಸುವ ಧಾರ್ಮಿಕ ಕಾರ್ಯ, ಖಾಸಗಿ ದರ್ಬಾರ್‌ಗಾಗಿ ಈ ಸಿಂಹಾಸನ ಜೋಡಣೆ ನಡೆಯುತ್ತಿದ್ದು, ಸ್ಟ್ರಾಂಗ್ ರೂಂನಿಂದ ಬಿಗಿ ಭದ್ರತೆಯೊಂದಿಗೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರ ಸಮ್ಮುಖದಲ್ಲಿ ಸಿಂಹಾಸನ ಜೋಡಣೆ ನಡೆಯುತ್ತಿದೆ.
ಇಂದು ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅರಮನೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಚಿನ್ನದ ಸಿಂಹಾಸನದ ಬಿಡಿಭಾಗ ಹಾಗೂ ಬೆಳ್ಳಿಯ ಭದ್ರಾಸನದ ಬಿಡಿ ಭಾಗಗಳನ್ನು ದರ್ಬಾರ್ ಹಾಲ್‌ಗೆ ತಂದು ಜೋಡಣೆ ಮಾಡಲಾಗುತ್ತಿದೆ.
ಇನ್ನು ಸೆಪ್ಟೆಂಬರ್.22ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭವಾಗಲಿದ್ದು, ಮೈಸೂರು ಜಿಲ್ಲಾಡಳಿತ ಇದಕ್ಕಾಗಿ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ.





