ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಬಂದೋಬಸ್ತ್‌ಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮೈಸೂರಿಗೆ ಆಗಮಿಸಿರುವ ಪೊಲೀಸರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕೇವಲ ಎರಡು ದಿನ ಮಾತ್ರ ಬಾಕಿಯಿದೆ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಸಿಎಂ, ಡಿಸಿಎಂಗೆ ವಿಶೇಷ ಉಡುಗೊರೆ ರೆಡಿ
ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 6900ಕ್ಕೂ ಹೆಚ್ಚಿನ ಪೊಲೀಸರು ಆಗಮಿಸಿದ್ದು, ಇವರೆಲ್ಲರಿಗೂ ನಗರದ ಪೊಲೀಸ್ ಭವನದಲ್ಲಿ ಊಟ ತಯಾರಿ ಮಾಡಲಾಗುತ್ತಿದೆ.
ಅನಿಲ್ ಅಪೂರ್ವ ವೆಜ್ ಕ್ಯಾಂಟರಿನ್ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗುತ್ತಿದ್ದು, ನೂರಾರು ಅಡುಗೆ ಸಿಬ್ಬಂದಿಗಳಿಂದ ಊಟ ತಯಾರಿ ಕೆಲಸ ನಡೆಯುತ್ತಿದೆ. ಊಟದ ಗುಣಮಟ್ಟ ಕಾಪಾಡಿಕೊಂಡಿರುವ ಕ್ಯಾಟರಿಂಗ್ ಮಾಲೀಕರು, ಅಡುಗೆ ಮಾಡುವ ಸ್ಥಳದಲ್ಲೂ ಸ್ವಚ್ಛತೆ ಕಾಪಾಡಿಕೊಂಡು ಬಂದಿದ್ದಾರೆ.
ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಊಟ ಹಾಗೂ ಸಂಜೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಪೊಲೀಸ್ ಭವನದಲ್ಲೇ ಊಟ ಪ್ಯಾಕಿಂಗ್ ಮಾಡಲಾಗುತ್ತಿದೆ. ಪ್ಯಾಕಿಂಗ್ ಬಳಿಕ ಪೊಲೀಸರ ಕರ್ತವ್ಯದ ಸ್ಥಳಕ್ಕೆ ಊಟ ಸರಬರಾಜು ಆಗಲಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…