ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿಯಿದ್ದು, ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ.
ಜಂಬೂಸವಾರಿ ವೀಕ್ಷಣೆಗೆ 48 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, VIP ಹಾಗೂ VVIPಗಳಿಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ. ಪೆಂಡಾಲ್ ಮೂಲಕ ನೆರಳಿನ ವ್ಯವಸ್ಥೆ ಮಾಡಲಾಗುತ್ತಿದ್ದು, ಜಂಬೂಸವಾರಿ ಸಾಗುವ ಮಾರ್ಗದುದ್ದಕ್ಕೂ ಬ್ಯಾರಿಕೇಡ್ ಅಳವಡಿಸಲಾಗಿದೆ.
ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ವಜ್ರಮುಷ್ಠಿ ಕಾಳಗಕ್ಕೆ ಜೆಟ್ಟಿಗಳ ಜೋಡಿ ಕಟ್ಟುವಿಕೆ
ಜಂಬೂಸವಾರಿ ಸಾಗುವ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ.
ಅರಮನೆಯಲ್ಲಿ ಜಂಬೂಸವಾರಿ ಕಣ್ತುಂಬಿಕೊಳ್ಳಲು 48 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.





