ಮೈಸೂರು: ನವರಾತ್ರಿ ಆರಂಭಕ್ಕೆ ಕೇವಲ ಇನ್ನೆರಡು ದಿನ ಮಾತ್ರ ಬಾಕಿಯಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಭರದ ಸಿದ್ಧತೆ ನಡೆಸಲಾಗಿದೆ.
ನವರಾತ್ರಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಅರಮನೆಯಲ್ಲಿ ದಸರಾ ಸಂಭ್ರಮ ಮೇಳೈಸಲಿದೆ. ಸೆಪ್ಟೆಂಬರ್.22ರಂದು ದಸರಾ ಉದ್ಘಾಟನೆಯ ದಿನದಂದು ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರತ್ನ ಖಚಿತ ಸಿಂಹಾಸನವೇರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.
ಈಗಾಗಲೇ ಸಿಂಹಾಸನವನ್ನು ಅರಮನೆಯ ಸ್ಟ್ರಾಂಗ್ ರೂಮ್‌ನಿಂದ ತಂದು ಕನ್ನಡಿ ತೊಟ್ಟಿಯಲ್ಲಿ ಜೋಡಣೆ ಮಾಡಲಾಗಿದ್ದು, ಸೆಪ್ಟೆಂಬರ್.22ರಂದು 5:30 ರಿಂದ 5:45ರ ಒಳಗೆ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಗುತ್ತದೆ. ಅದೇ ದಿನದಂದು 9:55 ರಿಂದ 10:15ರ ಒಳಗೆ ಚಾಮುಂಡಿ ತೊಟ್ಟಿಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ವಾಣಿವಿಲಾಸ ದೇವರ ಮನೆಯಲ್ಲಿ ಕಂಕಣಧಾರಣೆ ಮಾಡಲಾಗುತ್ತದೆ.
ಬೆಳಗ್ಗೆ 11:35ಕ್ಕೆ ಅರಮನೆಯ ಆವರಣದ ಕೋಡಿ ಸೋಮೇಶ್ವರ ದೇವಾಲಯದ ಬಳಿ ಪಟ್ಟದ ಆನೆ ಹಾಗೂ ಕುದುರೆ, ಹಸು ಜೊತೆ ಮಹಿಳೆಯರು ಕಳಸ ಹೊತ್ತು ಬರಲಿದ್ದು, ಮಂಗಳವಾದ್ಯದೊಂದಿಗೆ ಸವಾರಿ ತೊಟ್ಟಿಯ ಬಳಿ ಪೂಜಾ ಕೈಂಕರ್ಯಗಳು ನೆರವೇರಲಿವೆ.
ಸೆಪ್ಟೆಂಬರ್.23ರಿಂದ 29ರವರೆಗೆ ಖಾಸಗಿ ದರ್ಬಾರ್ ಜರುಗಲಿದ್ದು, ಸೆಪ್ಟೆಂಬರ್.29ರಂದು ಬೆಳಗ್ಗೆ 10:10ರಿಂದ 10:30ರ ಒಳಗೆ ಯದುವೀರ್ ಒಡೆಯರ್ ಅವರು ಸರಸ್ವತಿ ಪೂಜೆ ನೆರವೇರಿಸಲಿದ್ದಾರೆ. ಅಂದು ರಾತ್ರಿಯೇ ಖಾಸಗಿ ದರ್ಬಾರ್ ಕೊನೆಗೊಳ್ಳಲಿದೆ.
ಖಾಸಗಿ ದರ್ಬಾರ್ ಮುಗಿದ ಬಳಿಕ ಕನ್ನಡಿ ತೊಟ್ಟಿಯಲ್ಲಿ ಕಾಳರಾತ್ರಿ ಪೂಜೆ ನಡೆಯಲಿದ್ದು, ಆಯುಧ ಪೂಜೆಯ ದಿನದಂದು ಬೆಳಿಗ್ಗೆ 6 ಗಂಟೆಗೆ ಚಂಡಿ ಹೋಮ ಆರಂಭವಾಗಲಿದೆ. ಬೆಳಿಗ್ಗೆ 7:30 ರಿಂದ 7:42ರ ಒಳಗೆ ಪಟ್ಟದ ಕತ್ತಿ ಸೇರಿದಂತೆ ಖಾಸ ಆಯುಧಗಳನ್ನು ಅರಮನೆಯಿಂದ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ತಂದು ಪೂಜೆ ಸಲ್ಲಿಸಲಾಗುತ್ತದೆ.
8 ರಿಂದ 8:40ರ ಒಳಗೆ ಕತ್ತಿ ಹಾಗೂ ಖಾಸ ಆಯುಧಗಳನ್ನು ಕಲ್ಯಾಣ ಮಂಟಪದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಅಂದು ಸಂಜೆ ಯದುವೀರ್ ಒಡೆಯರ್ ಅವರು ಕಂಕಣ ವಿಸರ್ಜನೆ ಮಾಡಲಿದ್ದು, ಸೆಪ್ಟೆಂಬರ್.2ರಂದು 10 ಗಂಟೆಗೆ ವಿಜಯದಶಮಿ ಪೂಜೆ ನೆರವೇರಲಿದೆ. 10:55ರಿಂದ ವಿಜಯಯಾತ್ರೆ ಆರಂಭವಾಗಲಿದೆ. ಎಲ್ಲಾ ಪೂಜೆ ಮುಗಿದ ಬಳಿಕ ಜಂಬೂಸವಾರಿಗೆ ಚಾಲನೆ ದೊರೆಯಲಿದೆ.
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…