Mysore
26
few clouds

Social Media

ಶನಿವಾರ, 24 ಜನವರಿ 2026
Light
Dark

ದೇವಿ ಚಾಮುಂಡಿ ದ್ವೇಷ, ಅಸಹಿಷ್ಣುತೆಯನ್ನು ನಾಶ ಮಾಡಲಿ : ದಸರಾ ಉದ್ಘಾಟಕಿ ಬಾನು

ಮೈಸೂರು : ಪ್ರಜಾಪ್ರಭುತ್ವ ಒಂದು ವ್ಯವಸ್ಥೆಯಲ್ಲ. ಅದೊಂದು ಮೌಲ್ಯ. ಈ ನೆಲದಲ್ಲಿ ಸೌಹರ್ದದ ಕುರುಹುಗಳಿಗೆ. ಇಲ್ಲಿನ ಬಿಸಿಲು ಕೂಡ ಮಾನವೀಯತೆಯ ಪ್ರತೀಕವಾಗಿದೆ. ದೇವಿ ಚಾಮುಂಡಿ ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಯನ್ನು ನಾಶ ಮಾಡಲಿ ಎಂದು ಲೇಖಕಿ ಬಾನು ಮುಷ್ತಾಕ್‌ ಹೇಳಿದರು.

ನಾಡದೇವಿ ಚಾಮುಂಡೇಶ್ವರಿ ಮೂರ್ತಿಗೆ ದೀಪ ಬೆಳಗಿ, ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಪುಷ್ಪಾರ್ಚನೆ, ಮಂಗಳಾರತಿ ಸ್ವಿಕರಿಸುವುದು, ದೀಪ ಬೆಳಗವುದು ನನಗೆ ಹೊಸದಲ್ಲ. ಈ ಬಗ್ಗೆ ಈ ನಾಳೆ ನನ್ನ ಬದುಕು ಬರಹದ ಕುರಿತಾದ ಪುಸ್ತಕ ಬಿಡುಗಡೆಯಾಗಲಿದ್ದು, ಅದರಲ್ಲಿ ಉಲ್ಲೇಖವಿದೆ. ನನ್ನ ಮತ್ತು ಈ ಹಿಂದೂ ಧರ್ಮದ ಸಂಬಂಧ ಬಾಂಧವ್ಯ ಹೇಗೆ ಇದೆ ಅನ್ನುವುದರ ಬಗ್ಗೆ ನನ್ನ ಆತ್ಮಕಥೆಯಲ್ಲಿ ಬರೆದಿದ್ದೇನೆ ಎಂದರು.

ಮೈಸೂರು ದಸರಾ, ನಾಡಿನ ಸಂಸ್ಕೃತಿ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ. ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು, ಕನ್ನಡ ಭಾಷೆಯ ಅಂತರಾಳದ ಹೃದಯ ಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು, ಇದು ಅವಿಸ್ಮರಣೀಯವಾದ ಹೆಮ್ಮೆ ಎಂದು ಸ್ಮರಿಸಿದರು.

ತಮ್ಮ ಪ್ರತಿ ಮಾತಿನಲ್ಲೂ ಸಾಮರಸ್ಯದ ಕುರಿತು ಒತ್ತಿ ಹೇಳಿದ ಅವರು ಸರ್ವ ಜನಾಂಗದ ತೋಟವಾದ ನಾಡಿನಲ್ಲಿ ಪ್ರತಿ ಹೂ ತನ್ನ ಬಣ್ಣದಲ್ಲೆ ಅರಳಿ, ತನ್ನ ಸುವಾಸನೆಯನ್ನೇ ಬೀರಲಿ, ಪ್ರತಿ ಹಕ್ಕಿ ತನ್ನ ರಾಗದಲ್ಲೇ ಹಾಡಲಿ. ಆದರೆ ಎಲ್ಲವೂ ಒಟ್ಟದಾಗ ಸೌಹರ್ದದ ಹಾಡಾಗಲಿ ಎಂದು ಆಶಿಸಿದರು.

ನಾವೆಲ್ಲಾ ಒಂದೇ ಗಗನದಡಿಯ ಪಯಣಿಗರು ನಾವು ಎಲ್ಲರೂ ಒಂದೇ ಗಗನದಡಿಯ ಪಯಣಿಗರು. ಆಕಾಶವು ಯಾರನ್ನೂ ಬೇರ್ಪಡಿಸುವುದಿಲ್ಲ. ಭೂಮಿ ಯಾರನ್ನೂ ತಳ್ಳುವುದಿಲ್ಲ. ಮನುಷ್ಯನು ಮಾತ್ರ ಗಡಿ ಹಾಕುತ್ತಾನೆ. ಆ ಗಡಿಗಳನ್ನು ನಾವೇ ಅಳಿಸಬೇಕು. ಇಂದು ಈ ಹಬ್ಬ ಮೈಸೂರಿನ ಬೀದಿಗಳಲ್ಲಿ ಮಾತ್ರವಲ್ಲದೆ, ಇಡೀ ಜಗತ್ತಿನ ಹೃದಯಗಳಲ್ಲಿ ಬೆಳಗಲಿ ಎಂದು ಹಾರೈಸಿದರು.

Tags:
error: Content is protected !!