ಮೈಸೂರು : ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ದಸರಾ ಮಹೋತ್ಸವದ ಅಂಗವಾಗಿ ಉತ್ತನಹಳ್ಳಿ ಸಮೀಪದಲ್ಲಿ ಸೆ.23 ರಿಂದ ಜರುಗಲಿರುವ ಯುವದಸರಾ ಕಾರ್ಯಕ್ರಮದ ಸ್ಥಳವನ್ನು ಇಂದು ಪರಿಶೀಲನೆ ಮಾಡಿದರು.
ಕಾರ್ಯಕ್ರಮದ ಆಯೋಜನೆಯ ರೂಪುರೇಷೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಕಳೆದ ಬಾರಿಯಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಅತೀ ಹೆಚ್ಚು ಜನರು ಸೇರುವ ಯುವ ದಸರಾದಲ್ಲಿ ಯಾವುದೇ ಅನಾನುಕೂಲವಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ಮೈಸೂರು ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಯುವದಸರಾ ಕಾರ್ಯಕ್ರಮ ವೀಕ್ಷಣೆಗೆಂದು ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯವನ್ನು ಕಲ್ಪಿಸಬೇಕು ಎಂದು ತಿಳಿಸಿದರು.
ಯುವ ದಸರಾಗೆ ಸಹಸ್ರಾರು ಸಂಖ್ಯೆಯಲ್ಲಿ ಯುವಸಮೂಹ ಆಗಮಿಸಿ ಸಂಭ್ರಮಿಸುತ್ತಾರೆ. ಬಹುಮುಖ್ಯವಾಗಿ ಮಹಿಳೆಯರು ಹೆಚ್ಚಿನ ಭದ್ರತೆ ಒದಗಿಸಬೇಕು. ರಾತ್ರಿ ವೇಳೆ ಕಾರ್ಯಕ್ರಮ ನಡೆಯುವುದರಿಂದ ಎಲ್ಲಾ ಬಗೆಯ ಕ್ರಮ ಅನುಸರಿಸಬೇಕು. ಬೀದಿದೀಪದ ವ್ಯವಸ್ಥೆ, ವಾಹನ ನಿಲುಗಡೆಗೆ ಪಾರ್ಕಿಂಗ್ ಸ್ಥಳ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಿ ಮಾರ್ಗದರ್ಶನ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ.ಆರ್.ರಕ್ಷಿತ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್ ಎಂಬಾತನೇ…
ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ…
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…