ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಚಿನ್ನದ ಅಂಬಾರಿ ಹೊರಲು ಕ್ಯಾಪ್ಟನ್ ಅಭಿಮನ್ಯು ಸಜ್ಜಾಗುತ್ತಿದ್ದಾನೆ.
ಸ್ನಾನ ಮುಗಿಸಿ ಅಲಂಕಾರಗೊಂಡಿರುವ ಅಭಿಮನ್ಯುವಿಗೆ ಸಿಬ್ಬಂದಿಗಳು ಗಾದಿ ನಮ್ದ ಕಟ್ಟುತ್ತಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಾಡದೇವತೆ ಚಾಮುಂಡೇಶ್ವರಿ ವಿರಾಜಮಾನಳಾಗಿರುವ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊತ್ತು ಸಾಗಲಿದ್ದಾನೆ.
6ನೇ ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯುವಿಗೆ ಕುಮ್ಕಿ ಆನೆಗಳಾಗಿ ಕಾವೇರಿ ಹಾಗೂ ರೂಪ ಸಾಥ್ ನೀಡಲಿವೆ.





