Mysore
15
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಮೈಸೂರು ದಸರಾ 2025: ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ದಸರಾ ಜಂಬೂಸವಾರಿ ಮೆರವಣಿಗೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಇ ನಡುವೆ ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು.

ಮಧ್ಯಾಹ್ನದ ವೇಳೆ ಅಂಬಾರಿ ಬಸ್‌ನಲ್ಲಿ ಅರಮನೆಗೆ ಆಗಮಿಸಿದ ಸಿಎಂ ಹಾಗೂ ಸಚಿವಧ್ವಯರು, ಅರಮನೆಯ ಬಲರಾಮ ದ್ವಾರದ ಬಳಿ ಮಧ್ಯಾಹ್ನ 1 ಗಂಟೆ ಒಂದು ನಿಮಿಷದಿಂದ 1 ಗಂಟೆ 16 ನಿಮಿಷಕ್ಕೆ ಸಲ್ಲುವ ಶುಭ ಧನುರ್‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಕೆ.ವೆಂಕಟೇಶ್‌, ಶಿವರಾಜ್‌ ತಂಗಡಗಿ ಸೇರಿದಂತೆ ಸಚಿವರು ಹಾಗೂ ಶಾಸಕರು ಹಾಜರಿದ್ದರು. ಇನ್ನು ಪೂಜೆ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಡವಾಗಿ ಆಗಮಿಸಿ ಪೂಜೆಯಲ್ಲಿ ಭಾಗಿಯಾದರು.

Tags:
error: Content is protected !!