ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ತೆರೆದ ವಾಹನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ರೌಂಡ್ಸ್ ಹಾಕಿದರು.
ತೆರೆದ ವಾಹನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಶಿವರಾಜ್ ತಂಗಡಗಿ, ಶಾಸಕ ತನ್ವೀರ್ ಸೇಠ್ ಸೇರಿದಂತೆ ಹಲವರು ರೌಂಡ್ಸ್ ಹಾಕಿ ನೆರೆದಿದ್ದ ಜನರತ್ತ ಕೈಬೀಸಿದರು.





