ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ 2025: ಬನ್ನಿಮರಕ್ಕೆ ಪೂಜೆ ಸಲ್ಲಿಸಿದ ರಾಜವಂಶಸ್ಥ ಯದುವೀರ್‌ ಒಡೆಯರ್‌

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ.

ಇಂದು ನಡೆಯಲಿರುವ ಜಂಬೂಸವಾರಿ ಮೆರವಣಿಗೆ ಎಲ್ಲಾ ಸಿದ್ಧತೆಗಳು ನಡೆಯಲಿದುದ, ಅರಮನೆಯಲ್ಲಿ ಸಾಂಪ್ರದಾಯಿಕ ಪೂಜಾ ಪುನಸ್ಕಾರ ನಡೆಯುತ್ತಿದೆ.

ವಜ್ರಮುಷ್ಠಿ ಕಾಳಗ ನಡೆದ ಬಳಿಕ ಪಲ್ಲಕ್ಕಿಯೊಂದಿಗೆ ವಿಜಯಯಾತ್ರೆ ಆರಂಭಿಸಿದ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಬನ್ನಿಮರಕ್ಕೆ ಪೂಜೆ ಸಲ್ಲಿಸಿದರು.

ಇದನ್ನು ಓದಿ: ಮೈಸೂರು ದಸರಾ: ಅರಮನೆಯಲ್ಲಿ ಜಟ್ಟಿ ಕಾಳಗ

ಸಾಂಪ್ರದಾರಿಕ ಉಡುಗೆಯೊಂದಿಗೆ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಮೈಸೂರಿನ ಅರಮನೆ ಆವರಣದಲ್ಲಿರುವ ಬನ್ನಿಮರದ ಬಳಿ ಆಗಮಿಸಿ ಅಲ್ಲಿ ವಿಜಯದಶಮಿ ಪೂಜಾ ವಿಧಿ ವಿಧಾನಗಳನ್ನು ಪೂರ್ಣಗೊಳಿಸಿದರು.

ಬನ್ನಿಮರಕ್ಕೆ ಪೂಜೆ ಸಲ್ಲಿಸಿದ ಬಳಿಕವೇ ಅರಮನೆಗೆ ತೆರಳಿ ಯದುವೀರ್‌ ಒಡೆಯರ್‌ ಅವರು ಕಂಕಣ ವಿಸರ್ಜನೆ ಮಾಡಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

6 mins ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

33 mins ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

50 mins ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

4 hours ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

4 hours ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

5 hours ago