Mysore
21
broken clouds

Social Media

ಶುಕ್ರವಾರ, 13 ಮಾರ್ಚ್ 2026
Light
Dark

ಮೈಸೂರು ದಸರಾ 2025: ಅರಮನೆಯಿಂದ ಅಂಬಾರಿಯನ್ನು ಹೊರತರುತ್ತಿರುವ ಸಿಬ್ಬಂದಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯುತ್ತಿದ್ದು, ಸಿಬ್ಬಂದಿ ಅರಮನೆಯಿಂದ ಅಂಬಾರಿಯನ್ನು ಹೊರತರುತ್ತಿದ್ದಾರೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ಸ್ತಬ್ಧಚಿತ್ರಗಳು ಹಾಗೂ ವಿವಿಧ ಕಲಾ ತಂಡಗಳು ಸಾಗುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ.

ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: 58 ಸ್ತಬ್ಧ ಚಿತ್ರಗಳ ಮೆರುಗು

ಇನ್ನು ಅರಮನೆಯಿಂದ ಚಿನ್ನದ ಅಂಬಾರಿಯನ್ನು ಸಿಬ್ಬಂದಿಗಳು ಹೊರಗಡೆ ತರುತ್ತಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಅಭಿಮನ್ಯು ಆನೆಯ ಮೇಲೆ ಚಿನ್ನದ ಅಂಬಾರಿಯನ್ನು ಕಟ್ಟಲಾಗುತ್ತದೆ.

ಅಂಬಾರಿ ಒಳಗೆ ವಿರಾಜಮಾನಳಾಗಿರುವ ನಾಡದೇವತೆ ಚಾಮುಂಡೇಶ್ವರಿ ಉತ್ಸವಮೂರ್ತಿಯನ್ನು ಹೊತ್ತು ಕ್ಯಾಪ್ಟನ್‌ ಅಭಿಮನ್ಯು ರಾಜಮಾರ್ಗದಲ್ಲಿ ಗಜಗಾಂಭೀರ್ಯದ ಹೆಜ್ಜೆ ಹಾಕಲಿದ್ದಾನೆ.

ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂಸವಾರಿ ಮೆರವಣಿಗೆಯಲ್ಲಿ ಕ್ಯಾಪ್ಟನ್‌ ಅಭಿಮನ್ಯು ಅಂಬಾರಿ ಹೊತ್ತು ಸಾಗಲಿದ್ದು, ಇದನ್ನು ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ.

Tags:
error: Content is protected !!