ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯುತ್ತಿದ್ದು, ಸಿಬ್ಬಂದಿ ಅರಮನೆಯಿಂದ ಅಂಬಾರಿಯನ್ನು ಹೊರತರುತ್ತಿದ್ದಾರೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ಸ್ತಬ್ಧಚಿತ್ರಗಳು ಹಾಗೂ ವಿವಿಧ ಕಲಾ ತಂಡಗಳು ಸಾಗುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ.
ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: 58 ಸ್ತಬ್ಧ ಚಿತ್ರಗಳ ಮೆರುಗು
ಇನ್ನು ಅರಮನೆಯಿಂದ ಚಿನ್ನದ ಅಂಬಾರಿಯನ್ನು ಸಿಬ್ಬಂದಿಗಳು ಹೊರಗಡೆ ತರುತ್ತಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಅಭಿಮನ್ಯು ಆನೆಯ ಮೇಲೆ ಚಿನ್ನದ ಅಂಬಾರಿಯನ್ನು ಕಟ್ಟಲಾಗುತ್ತದೆ.
ಅಂಬಾರಿ ಒಳಗೆ ವಿರಾಜಮಾನಳಾಗಿರುವ ನಾಡದೇವತೆ ಚಾಮುಂಡೇಶ್ವರಿ ಉತ್ಸವಮೂರ್ತಿಯನ್ನು ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜಮಾರ್ಗದಲ್ಲಿ ಗಜಗಾಂಭೀರ್ಯದ ಹೆಜ್ಜೆ ಹಾಕಲಿದ್ದಾನೆ.
ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂಸವಾರಿ ಮೆರವಣಿಗೆಯಲ್ಲಿ ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊತ್ತು ಸಾಗಲಿದ್ದು, ಇದನ್ನು ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…