ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಶುರುವಾಗಿದ್ದು, ಕ್ಯಾಪ್ಟನ್ ಅಭಿಮನ್ಯುವಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ಶುರುವಾಗಿದೆ.
ಅರಮನೆಯಿಂದ ಸಿಬ್ಬಂದಿಗಳು ಬಿಗಿ ಬಂದೋಬಸ್ತ್ ಮೂಲಕ ಚಿನ್ನದ ಅಂಬಾರಿಯನ್ನು ಹೊರತಂದು, ಕ್ಯಾಪ್ಟನ್ ಅಭಿಮನ್ಯುವಿಗೆ ಅದನ್ನು ಕಟ್ಟುವ ಕೆಲಸ ಮಾಡುತ್ತಿದ್ದಾರೆ.
750 ಕೆಜಿ ತೂಕದ ಚಿನ್ನದ ಅಂಬಾರಿ ಒಳಗೆ ನಾಡದೇವತೆ ಚಾಮುಂಡೇಶ್ವರಿ ವಿರಾಜಮಾನಳಾಗಿದ್ದು, ಕ್ಯಾಪ್ಟನ್ ಅಭಿಮನ್ಯುವಿಗೆ ರೂಪ ಹಾಗೂ ಕಾವೇರಿ ಆನೆಗಳು ಕುಮ್ಕಿ ಆನೆಗಳಾಗಿ ಸಾಥ್ ನೀಡುತ್ತಿವೆ.





