ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ಬೆಂಗಳೂರಿನಿಂದ ಮೈಸೂರಿಗೆ 2,300 ವಿಶೇಷ ಬಸ್‌

ಬೆಂಗಳೂರು : ಮೈಸೂರು ದಸರಾ ಉತ್ಸವದ ರಜೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2300ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಿದೆ.

ದಸರಾ ಮಹೋತ್ಸವದ ಅಂಗವಾಗಿ ರಾಜ್ಯ ಹಾಗೂ ದೇಶದ ವಿವಿಧ ಕಡೆಗಳಿಂದ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಹಿನ್ನಲೆ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುವುದನ್ನು ಮನಗಂಡು ಕೆಎಸ್‍ಆರ್‍ಟಿಸಿ ವಿಶೇಷ ಬಸ್ ವ್ಯವಸ್ಥೆ ಒದಗಿಸಿದೆ.

ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್‍ಕ್ಲಾಸ್, ಅಂಬಾರಿ ಕ್ಲಬ್‍ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‍ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೆಎಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ.

ದಿನಾಂಕ ಸೆ.26, 27 ಹಾಗೂ 30ರಂದು ಬೆಂಗಳೂರಿನಿಂದ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ 2300ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ವಿಶೇಷ ಬಸ್‍ಗಳ ಆಚರಣೆ ಮಾಡಲಾಗುವುದು. ನಂತರ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ.2 ಹಾಗೂ 5ರಂದು ವಿಶೇಷ ಬಸ್‍ಗಳ ಸೇವೆಯನ್ನು ಒದಗಿಸಲಾಗುವುದು ಎಂದು ಹೇಳಿದೆ.

ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

3 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

7 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

7 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

7 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

10 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

10 hours ago