ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ.
ಕ್ಯಾಪ್ಟನ್ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದು, ಅಭಿಮನ್ಯುವಿಗೆ ಕಾವೇರಿ ಹಾಗೂ ರೂಪ ಆನೆಗಳು ಕುಮ್ಕಿ ಆನೆಗಳಾಗಿ ಸಾಥ್ ನೀಡಿವೆ.
ಇದನ್ನು ಓದಿ : ಮೈಸೂರು ದಸರಾ: ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ
750 ಕೆಜಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ನಾಡದೇವತೆ ಚಾಮುಂಡೇಶ್ವರಿ ದೇವಿ ಉತ್ಸವ ಮೂರ್ತಿಯನ್ನು ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜಬೀದಿಗಳಲ್ಲಿ ಗಜ ಗಾಂಭೀರ್ಯದ ಹೆಜ್ಜೆ ಹಾಕುತ್ತಿದ್ದು, ಇದನ್ನು ಕಣ್ತುಂಬಿಕೊಳ್ಳಲು ರಸ್ತೆಯ ಇಕ್ಕೆಲಗಳಲ್ಲಿ ಜನರು ಕಿಕ್ಕಿರಿದು ಸೇರಿದ್ದಾರೆ.





