ಮೈಸೂರು: ಸಿನಿಮಾ ಎಂದರೆ ಅರಿವು, ಸಾಮಾಜಿಕ ಜವಾಬ್ದಾರಿಯಾಗಿದೆ. ತಮ್ಮ ಸಾಹಿತ್ಯ, ಸಂಗೀತದ ಮೂಲಕದ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ನಗರದ ಮಾಲ್ ಆಫ್ ಮೈಸೂರು ಮಳಿಗೆಯಲ್ಲಿ ದಸರಾ ಚಲನಚಿತ್ರೋತ್ಸವ ಉಪ ಸಮಿತಿವತಿಯಿಂದ ಶನಿವಾರ ಆಯೋಜಿಸಿದ್ದ ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಾರತದ ಜನ ಜೀವನದ ಮೇಲೆ ಗಂಭೀರ ಪರಿಣಾಮ ಬೀರುವ ಸಿನಿಮಾಗಳ ಕ್ಷೇತ್ರದ ಮೂಲಕ ದೇಶದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯ ಪ್ರಜ್ಞೆಯನ್ನು ಮೂಡಿಸಬೇಕು ಎಂದರು.
ನಟರು ತಮ್ಮ ಅಭಿನಯ, ಸಂಗೀತ, ಸಾಹಿತ್ಯದ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸಗಳನ್ನು ಸಿನಿಮಾಗಳು ಮಾಡುತ್ತಿವೆ. ಹೀಗಾಗಿ ಅತ್ಯಂತ ಪ್ರಭಾವಶಾಲಿಯಾಗಿ ಯುವ ಜನರಲ್ಲಿ ಜಾತ್ಯತೀತತೆಯ ಅರಿವು ಮೂಡಿಸಿ ಸಮಾಜಮುಖಿ ಕೆಲಸ ಸಿನಿಮಾಗಳಿಂದ ಆಗಬೇಕು ಎಂದರು.
ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ಖ್ಯಾತಿಯ ಬಿ.ಸರೋಜಾದೇವಿ ಅಗಲಿದ್ದಾರೆ. ಕನ್ನಡ, ತಮಿಳು,ತೆಲುಗು, ಹಿಂದಿ ಚಿತ್ರಗಳಲ್ಲಿ ಅಭಿನಯಿಸಿ ತಮ್ಮ ನಟನೆಯ ಮೂಲಕ ಸಾಮಾಜಿಕ ಸಂದೇಶಗಳನ್ನು ಸಾರುವ ಮೂಲಕ ಖ್ಯಾತಿ ಪಡೆದಿದ್ದರು. ಇವರ ಕೊಡುಗೆಯನ್ನು ಸ್ಮರಿಸಿ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಿದರು.
ದಸರಾ ಎನ್ನುವುದು ಸಾಮಾಜಿಕ, ಶೈಕ್ಷಣಿಕ, ಕ್ರೀಡೆ-ಸಂಗೀತ, ಸಾಂಸ್ಕೃತಿಕ ಕಲಾ ಪ್ರಕಾರಗಳ ಮೂಲಕ ದೇಶದ ಏಕತೆ ಸಾರಿ ಭಾರತೀಯೆಲ್ಲರೂ ಒಂದೇ ಎನ್ನುವ ಸಂದೇಶ ನೀಡುವ ನಾಡಹಬ್ಬ. ಈ ನಾಡಹಬ್ಬದಲ್ಲಿ ಸಮಸ್ತ ಜನರು ಒಟ್ಟಿಗೆ ಸೇರಿ ಕನ್ನಡಾಂಬೆಯನ್ನು ಗೌರವಿಸಿ ಸೋದರತೆಯಿಂದ ಬದುಕುವ ವಾತಾವರಣವನ್ನು ನಿರ್ಮಿಸಲಿದೆ. ಜೊತೆಗೆ ನಮ್ಮ ಸಂಸ್ಕೃತಿ, ಪರಂಪರೆಯ ವೈಭವವನ್ನು ಉಳಿಸಿಕೊಳ್ಳುವ ಕೆಲಸವಾಗಲಿದೆ ಎಂದರು.
ನಟಿ ಸಂಧ್ಯಾ ಅರಕೆರೆ ಮಾತನಾಡಿ, ನಾನು ಮೈಸೂರಿನವಳಾಗಿರುವುದು ನನಗೆ ತುಂಬಾ ಸಂತೋಷವಾಗಿದೆ. ಪ್ರತಿ ಬಾರಿ ನಾನು ಮೈಸೂರಿನವರಾಗಿ ದಸರಾ ವೀಕ್ಷಣೆಮಾಡುತ್ತಿದೆ. ಆದರೆ ಈಗ ಸಿನಿಮಾರಂಗದಿಂದ ಬಂದು ಈ ದಸರಾದಲ್ಲಿ ಭಾಗಿಯಾಗಿರುವುದು ನನಗೆ ತುಂಬಾ ಸಂತೋಷ ಉಂಟುಮಾಡಿದೆ ಎಂದು ಹೇಳಿದರು.
ನಟ ಪೃಥ್ವಿ ಅಂಬರ್ ಮಾತನಾಡಿ, ಕೆಡುಕನ್ನು ಗೆಲ್ಲುವಂತಹ ಒಳಿತನ್ನು ಮಾಡುವಂತಹ ಒಂದು ಹಬ್ಬ ಎಂದರೆ ನಮ್ಮ ಮೈಸೂರು ದಸರಾ ಹಬ್ಬ, ಮೈಸೂರು ಎಂದರೆ ನನಗೆ ಚಿಕ್ಕ ವಯಸ್ಸಿನಿಂದಲೂ ಒಂದು ದೊಡ್ಡ ಸೆಳೆತ. ಐತಿಹಾಸಿಕವಾಗಿ, ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಜಿಲ್ಲೆ ಎಂದರೆ ಮೈಸೂರು. ಮೈಸೂರು ಎಂದರೆ ನನಗೆ ಹೆಚ್ಚು ಪ್ರೀತಿ ಎಂದು ಹೇಳಿದರು.
ಪ್ರೇಕ್ಷಕರಿಗೆ ಚಲನಚಿತ್ರಗಳನ್ನು ಕೊಡುವುದು ಚಲನ ಚಿತ್ರೋತ್ಸವ. ಸಿನಿಮಾ ಕ್ಷೇತ್ರ ಎಂದರೆ ಒಂದು ಪ್ರಭಾವಿ ಕ್ಷೇತ್ರ. ಪ್ರತಿಯೊಂದು ಚಲನ ಚಿತ್ರಗಳು ಸಮಾಜದಲ್ಲಿ ರಚನಾತ್ಮಕ ಬದಲಾವಣೆಗಳಾಗುತ್ತದೆ. ಪ್ರೇಕ್ಷಕರು ಹೆಚ್ಚು ಸಿನಿಮಾಗಳನ್ನು ನೋಡಬೇಕು ಅದರಲ್ಲಿ ಬರುವಂತಹ ಒಳ್ಳೆಯ ವಿಚಾರಗಳನ್ನು ಪ್ರೇಕ್ಷಕರು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಗಾಯಕ ಜಸ್ಕರನ್ ಸಿಂಗ್ ಅವರು ಕೃಷ್ಣಂ ಪ್ರಣಯ ಸಖಿ ಚಿತ್ರದ ದ್ವಾಪರ ದಾಟುತ ನನ್ನನೆ ನೋಡಲು ನನ್ನನ್ನೇ ಸೇರಲು ಬಂದ ರಾಧಿಕೆ… ಎಂಬ ಹಾಡು ಹೇಳುವುದರ ಮೂಲಕ ಪ್ರೇಕ್ಷಕರನ್ನು ರಂಜಿಸಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…