Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮೈಸೂರು ದಸರಾ: ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ.

ದಸರಾ ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ಸಾಗಿದನು. ಕ್ಯಾಪ್ಟನ್‌ ಅಭಿಮನ್ಯುಗೆ ಕುಮ್ಕಿ ಆನೆಗಳಾಗಿ ಕಾವೇರಿ ಹಾಗೂ ರೂಪ ಆನೆಗಳು ಸಾಥ್‌ ನೀಡಿದವು.

ಇದನ್ನು ಓದಿ : ಮೈಸೂರು ದಸರಾ: ಅಭಿಮನ್ಯುಗೆ ಅಂಬಾರಿ ಕಟ್ಟುವ ಪ್ರಕ್ರಿಯೆ ವೀಕ್ಷಿಸಿದ ರಾಜಮಾತೆ ಪ್ರಮೋದಾದೇವಿ ಒಡೆಯರ್‌

ಬಳಿಕ ಅರಮನೆ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಶಿವರಾಜ್‌ ತಂಗಡಗಿ,  ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಸಂಜೆ 4.42ರಿಂದ 5.06ರೊಳಗೆ ಸಲ್ಲುವ ಶುಭ ಕುಂಭಲಗ್ನದಲ್ಲಿ ಜಂಬೂಸವಾರಿಗೆ ಪುಷ್ಪಾರ್ಚನೆ ಸಲ್ಲಿಸಿದರು.

ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಅರಮನೆ ವೇದಿಕೆಯತ್ತ ಬಂದು ನಿಂತ ಬಳಿಕ ಮೊದಲು ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು. ಆ ತಕ್ಷಣವೇ 21 ಸುತ್ತು ಕುಶಾಲತೋಪುಗಳನ್ನು ಸಿಡಿಸುವ ಮೂಲಕ ಗೌರವ ಸಮರ್ಪಿಸಲಾಯಿತು.

ಬಳಿಕ ಕ್ಯಾಪ್ಟನ್‌ ಅಭಿಮನ್ಯು ಚಿನ್ನದ ಅಂಬಾರಿಯನ್ನು ಹೊತ್ತು ಅರಮನೆಯಿಂದ ಬನ್ನಿಮಂಟಪಕ್ಕೆ ತೆರಳಿದನು.

Tags:
error: Content is protected !!