ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ.
ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ಸಾಗಿದನು. ಕ್ಯಾಪ್ಟನ್ ಅಭಿಮನ್ಯುಗೆ ಕುಮ್ಕಿ ಆನೆಗಳಾಗಿ ಕಾವೇರಿ ಹಾಗೂ ರೂಪ ಆನೆಗಳು ಸಾಥ್ ನೀಡಿದವು.
ಇದನ್ನು ಓದಿ : ಮೈಸೂರು ದಸರಾ: ಅಭಿಮನ್ಯುಗೆ ಅಂಬಾರಿ ಕಟ್ಟುವ ಪ್ರಕ್ರಿಯೆ ವೀಕ್ಷಿಸಿದ ರಾಜಮಾತೆ ಪ್ರಮೋದಾದೇವಿ ಒಡೆಯರ್
ಬಳಿಕ ಅರಮನೆ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಶಿವರಾಜ್ ತಂಗಡಗಿ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಸಂಜೆ 4.42ರಿಂದ 5.06ರೊಳಗೆ ಸಲ್ಲುವ ಶುಭ ಕುಂಭಲಗ್ನದಲ್ಲಿ ಜಂಬೂಸವಾರಿಗೆ ಪುಷ್ಪಾರ್ಚನೆ ಸಲ್ಲಿಸಿದರು.
ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಅರಮನೆ ವೇದಿಕೆಯತ್ತ ಬಂದು ನಿಂತ ಬಳಿಕ ಮೊದಲು ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು. ಆ ತಕ್ಷಣವೇ 21 ಸುತ್ತು ಕುಶಾಲತೋಪುಗಳನ್ನು ಸಿಡಿಸುವ ಮೂಲಕ ಗೌರವ ಸಮರ್ಪಿಸಲಾಯಿತು.
ಬಳಿಕ ಕ್ಯಾಪ್ಟನ್ ಅಭಿಮನ್ಯು ಚಿನ್ನದ ಅಂಬಾರಿಯನ್ನು ಹೊತ್ತು ಅರಮನೆಯಿಂದ ಬನ್ನಿಮಂಟಪಕ್ಕೆ ತೆರಳಿದನು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…