ಮೈಸೂರು : ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ನಾಲ್ಕನೇ ದಿನದ ‘ಯುವಸಂಭ್ರಮ’ದಲ್ಲಿ ದೇಶಭಕ್ತಿ, ರಾಷ್ಟ್ರೀಯತೆ, ಆಪರೇಷನ್ ಸಿಂಧೂರ್, ಕನ್ನಡ ನಾಡು ನುಡಿ ನೃತ್ಯರೂಪಕಗಳು ಯುವಸಮೂಹದಲ್ಲಿ ದೇಶಪ್ರೇಮದ ಕಿಚ್ಚನ್ನು ಹೆಚ್ಚಿಸಿದವು.
ದೇಶಭಕ್ತಿ, ರಾಷ್ಟ್ರೀಯತೆ, ಮಹಿಳಾ ಸಬಲೀಕರಣ, ಜೈ ಜವಾನ್– ಜೈ ಕಿಸಾನ್, ಜಾನಪದ, ಆಪರೇಷನ್ ಸಿಂಧೂರ್ , ಕನ್ನಡ ನಾಡು ನುಡಿ ಸೇರಿದಂತೆ ವಿವಿಧ ವಿಷಯಗಳ ಮೇಲೆ ವಿದ್ಯಾರ್ಥಿಗಳು ಪ್ರಸ್ತುಪಡಿಸಿದ ರೂಪಕಗಳು ಪ್ರೇಕ್ಷಕ ಸಮೂಹದಲ್ಲಿ ಸಂಚನ ಮೂಡಿಸಿದವು.
ಮೈಸೂರು ಸಾತಗಳ್ಳಿ ವಿಶ್ವ ಭಾರತಿ ಕಾಲೇಜಿನಿಂದ ದಸರಾ ವೈಭವ, ಮೈಸೂರು ಹೆಚ್.ಡಿ ಕೋಟೆ ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜ್ ಸಾಮಾಜಿಕ ನ್ಯಾಯ, ಮೈಸೂರು ಬಿಳಿಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರೈತರು/ ಕೃಷಿ ಚಟುವಟಿಕೆ, ಚಾಮರಾಜನಗರ ಗುಂಡ್ಲುಪೇಟೆ ಬಾಬು ಸರ್ಕಾರಿ ಪದವಿ ಪೂರ್ವ ಕಾಲೇಜು ತೆರಕಣಾಂಬಿ ಕಾಲೇಜಿನ ವಿದ್ಯಾರ್ಥಿಗಳು ಸುದ್ದಿ ಮತ್ತು ಆಹಾರ ಧಾನ್ಯಗಳು, ಬೆಂಗಳೂರು ಹನುಮಂತನಗರ ನಗರ ಶ್ರೀ ಬಾಲಾಜಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದೇಶದ ಸ್ವಾತಂತ್ರ್ಯದಲ್ಲಿ ಗಾಂಧೀಜಿಯವರ ಪಾತ್ರಎಂಬ ನೃತ್ಯ ಪ್ರದರ್ಶನ ಮಾಡಿದರು.
ಇಂದು ನಡೆದ ಕಾರ್ಯಕ್ರಮದಲ್ಲಿ 58 ನೃತ್ಯ ಪ್ರದರ್ಶನಗಳನು ಮಾಡಲಾಯಿತು. ನೃತ್ಯ ಪ್ರಕಾರ, ಸಾಂಸ್ಕೃತಿಕ ಪರಂಪರೆ, ದೇಶಭಕ್ತಿ, ಅಂಬಾರಿ ಆನೆ ಕೃಷ್ಣ, ದಸರಾ ವೈಭವ, ಆರೋಗ್ಯಕ್ಕೆ ಸಂಬಂಧಿಸಿದ, ಜನಕೇಂದ್ರಿತ, ಪರಿಸರ ಸಂರಕ್ಷಣೆಯಲ್ಲಿ ಯುವ ಜನತೆಯ ಪಾತ್ರ, ಫ್ಯೂಜನ್, ಪೌರಾಣಿಕ, ಭಾರತೀಯ ಯೋಧರ ಪಾತ್ರ, ಕೊಡವ ನೃತ್ಯ, ಕರ್ನಾಟಕ ಜಾನಪದ ಹೀಗೆ ನಾನಾ ರೀತಿಯಿಂದ ಹಲವಾರು ಕಾಲೇಜು ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನದಿಂದ ಯುವಕರನ್ನು ರಂಜಿಸಿದರು.
ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…
ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…
ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…
ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…
ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…