ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಅಂಗವಾಗಿ ಮೈಸೂರು ಅರಮನೆಯಲ್ಲಿ ರಾಜವಂಶಸ್ಥರಿಂದ ಸಾಂಪ್ರದಾಯಿಕ ಪೂಜಾ ಕೈಂಕರ್ಯಗಳು ನೆರವೇರಿವೆ.
ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿಜಯಯಾತ್ರೆ ನೆರವೇರಿಸುವುದರೊಂದಿಗೆ ತರಾಜಮನೆತನದ ದಸರಾ ಕಾರ್ಯಕ್ರಮಗಳಿಗೆ ತೆರೆ ಬಿದ್ದಿದೆ.
ಇನ್ನು ವಿಜಯದಶಮಿ ಜಂಬೂಸವಾರಿ ಮೆರವಣಿಗೆ ವೇಳೆ ಯದುವೀರ್ ಒಡೆಯರ್ ಅವರು ಕೂಡ ಪುಷ್ಪಾರ್ಚನೆಯಲ್ಲಿ ಭಾಗಿಯಾಗಲಿದ್ದು, ಜಂಬೂಸವಾರಿಗೆ ಅದ್ಧೂರಿ ಚಾಲನೆ ದೊರೆಯಲಿದೆ.





