Mysore
30
scattered clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

Mysuru dasara | ಮೈಸೂರಿಗೆ 610 ವಿಶೇಷ ಬಸ್ ; ದಿನದ ಪ್ರವಾಸಕ್ಕೆ ವಿಶೇಷ ಪ್ಯಾಕೇಜ್‌

ಮೈಸೂರು : ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ಬಸ್ ಸೇರಿದಂತೆ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣ ಸೇರಿದಂತೆ 610 ಬಸ್‌ಗಳನ್ನು ಒದಗಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್ ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು, ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 350 ಹೆಚ್ಚುವರಿ ಬಸ್‍ಗಳು ಸೇರಿದಂತೆ ಒಟ್ಟಾರೆ 610 ದಸರಾ ವಿಶೇಷ ಬಸ್‍ಗಳನ್ನು ಒದಗಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿರುತ್ತದೆ.

ಒಂದು ದಿನದ ವಿಶೇಷ ಪ್ರವಾಸ ಸಾರಿಗೆ

ಗಿರಿದರ್ಶಿನಿ : ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ (ಪ್ರಯಾಣದರ ವಯಸ್ಕರಿಗೆ: 450 ರೂ. ಮಕ್ಕಳಿಗೆ 300 ರೂ.)

ಜಲದರ್ಶಿನಿ: ಗೋಲ್ಡನ್‍ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ.ಆರ್.ಎಸ್. (ಪ್ರಯಾಣದರ ವಯಸ್ಕರಿಗೆ:.500 ರೂ. ಮತ್ತು ಮಕ್ಕಳಿಗೆ 350)

ದೇವದರ್ಶಿನಿ: ನಂಜನಗೂಡು, ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ಪ್ರಯಾಣದರ ವಯಸ್ಕರಿಗೆ: 330 ರೂ. ಮತ್ತು ಮಕ್ಕಳಿಗೆ 225 ರೂ.)
ಈ ಪ್ಯಾಕೇಜ್‍ಗಳನ್ನು ಸೆ.27ರಿಂದ ಅ.7ರವರೆಗೆ ಕಲ್ಪಿಸಲಾಗಿದೆ.

Tags:
error: Content is protected !!