ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ನೀಲಾಗಸದಲ್ಲಿ ಉಕ್ಕಿನ ಹಕ್ಕಿಗಳ ರಂಗಿನಾಟ

ಮೈಸೂರು : ಕೆಂಪು ಮತ್ತು ಬಿಳಿ ಬಣ್ಣದ ಹೊಗೆಯನ್ನಾರಿಸುವುದರ ಜೊತೆಗೆ ಬೆಂಕಿಯ ಉಂಡೆಗಳನ್ನು ಉಗುಳುತ್ತಾ ನಾ ಮುಂದೆ, ನೀ‌ ನನ್ನ ಹಿಂದೆ ಎಂಬಂತೆ ಬಾನಂಗಳದಲ್ಲಿ ಲೋಹದ ಹಕ್ಕಿಗಳು ವೈಮಾನಿಕ ಹಾರಾಟದ ಮೂಲಕ ತನ್ನ ಯಶಸ್ಸು ಮತ್ತು ಧೈರ್ಯವನ್ನು ಪ್ರದರ್ಶಿಸುತ್ತಿದ್ದರೆ, ಇತ್ತ ಮೈಸೂರಿನ ಜನರು ಶಿಳ್ಳೆ, ಚಪ್ಪಾಳೆ ಹಾಗೂ ಜೋರಾದ ಚೀತ್ಕಾರದೊಂದಿಗೆ ಸಂಭ್ರಮಿಸಿದರು.

ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ ಮತ್ತು‌ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ನಗರದ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಭಾರತೀಯ ವಾಯುಪಡೆ(ಐ.ಎ.ಎಫ್) ಸಾರ‌ಂಗ ತಂಡದಿಂದ ನಡೆದ ವೈಮಾನಿಕ ಪ್ರದರ್ಶನದಲ್ಲಿ ನವಿಲಿನ ಚಿತ್ತಾರವಿರುವ ಲೋಹದ ಹಕ್ಕಿಗಳು ನೆರೆದಿದ್ದವರು ಲೋಹದ ಹಕ್ಕಿಯ ಚಮತ್ಕಾರಿ ಪ್ರದರ್ಶನಕ್ಕೆ ಮಾರುಹೋದರು.

ಇದನ್ನೂ ಓದಿ:-ಶ್ರೀರಂಗಪಟ್ಟಣ | ಎಚ್‌ಐವಿ,ಏಡ್ಸ್‌ ಜಾಗೃತಿಗೆ ರೆಡ್‌ ರನ್‌ ಮ್ಯಾರಥಾನ್‌

ಸುಮಾರು 22 ರಿಂದ‌ 25 ನಿಮಿಷಗಳ‌ ಕಾಲ‌ ಶರವೇಗದಲ್ಲಿ ನಡೆದಂತಹ ವೈಮಾನಿಕ ಹಾರಾಟದಲ್ಲಿ ಡಾಲ್ಫೀನ್ ಸ್ಲೀಪ್, ಸಾರಂಗ್ ಸ್ಪ್ಲೀಟ್, ಹಾರ್ಟ್ ಫಾರ್ಮೇಷನ್, ಡಿವೈನ್ ಗ್ಲಾಸ್, ಡಬಲ್ ಏರೋ ಕ್ರಾಸ್ ಸೇರಿದಂತೆ ಒಟ್ಟು 16 ರೀತಿಯ ಮಾದರಿಗಳನ್ನು ವೈಮಾನಿಕ ಪ್ರದರ್ಶನದಲ್ಲಿ ಪ್ರದರ್ಶಿಸಲಾಯಿತು. ಇದಕ್ಕಾಗಿ ಒಟ್ಟು 70 ಸಿಬ್ಬಂದಿಗಳು ಶ್ರಮಿಸಿದ್ದು, ಐದು ಸಾರಂಗಗಳು ಅತ್ಯದ್ಭುತವಾದ ಪ್ರದರ್ಶನ‌ ನೀಡುವ ಮೂಲಕ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಮಂದಿಯ ಮನಸ್ಸನ್ನು ಸೂರೆ ಮಾಡಿದರು.

ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ, ಪಶುಸಂಗೋಪನೆ‌ ಮತ್ತು ರೇಷ್ಮೆ ಇಲಾಖಾ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಡಿ ರವಿಶಂಕರ್, ವಿಧಾನ ಪರಿಷತ್‌ ಸದಸ್ಯರಾದ ವಿವೇಕಾನಂದ, ಕೆ.ಶಿವಕುಮಾರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

4 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

4 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

4 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

4 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

4 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

5 hours ago