ನಮ್ಮ ಮೈಸೂರ ದಸರಾ 2025

Mysuru Dasara | ದೀಪಾಲಂಕಾರ ಕಣ್ತುಂಬಿಕೊಂಡ ಜನಸಾಗರ

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಗಳಲ್ಲಿ ಒಂದಾದ ವಿದ್ಯುತ್‌ ದೀಪಾಲಂಕಾರಕ್ಕೆ ಇಂಧನ ಸಚಿವರಾದ ಕೆ.ಜೆ. ಜಾರ್ಜ್‌ ಚಾಲನೆ ನೀಡಿದರು.

ಇಲ್ಲಿನ ಸಯ್ಯಾಜಿರಾವ್‌ ರಸ್ತೆಯಲ್ಲಿರುವ ಹಸಿರು ಚಪ್ಪರದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಸೋಮವಾರ ಸಂಜೆ ದಸರಾ ವಿದ್ಯುತ್‌ ದೀಪಾಲಂಕಾರಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ ವತಿಯಿಂದ ದಸರಾ ದೀಪಾಲಂಕಾರ ಮಾಡಲಾಗಿದ್ದು, ಕಳೆದ ವರ್ಷಕ್ಕಿಂತಲೂ ಹೆಚ್ಚು ಆಕರ್ಷಣೀಯವಾಗಿ ಈ ಬಾರಿಯ ದೀಪಾಲಂಕಾರ ಕಂಗೊಳಿಸಲಿದೆ‌.‌

ಮುಖ್ಯಮಂತ್ರಿಯವರು ಸಹ ಹೆಚ್ಚು ಆಕರ್ಷಕ ದೀಪಾಲಂಕಾರ ಮಾಡುವಂತೆ ಸೂಚನೆ ನೀಡಿದ್ದರು. ಈ ನಿಟ್ಟಿನಲ್ಲಿ ಎಲ್ಲರೂ ದೀಪಾಲಂಕಾರವನ್ನು ಕಣ್ತುಂಬಿಕೊಳ್ಳುವ ಮೂಲಕ ದಸರೆಯನ್ನು ಆನಂದಿಸಬಹುದಾಗಿದ್ದು, ಇಂದಿನಿಂದ‌ 21 ದಿನಗಳ ಕಾಲ ಸ್ಥಳೀಯರು ಹಾಗೂ ಪ್ರವಾಸಿಗರು ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಬಹುದಾಗಿದೆ‌ ಎಂದರು.

ದಸರಾ ಮಹೋತ್ಸವದ ಹೊಸ ಆಕರ್ಷಣೆಯಾಗಿರುವ ಡ್ರೋನ್ ಪ್ರದರ್ಶನ ಈ ಬಾರಿ ಮತ್ತಷ್ಟು ವರ್ಣರಂಜಿತವಾಗಿರಲಿದ್ದು, ಕಳೆದ ಬಾರಿ 1500 ಡ್ರೋನ್ ಬಳಸಿಕೊಂಡು ನಡೆಸಲಾಗಿದ್ದ ಡ್ರೋನ್ ಪ್ರದರ್ಶನದಲ್ಲಿ ಈ ಬಾರಿ 3000 ಸಾವಿರ ಡ್ರೋನ್ ಬಳಸಿಕೊಂಡು ನಡೆಸಲಾಗುತ್ತಿದ್ದು ಗಿನ್ನಿಸ್ ರೆಕಾರ್ಡ್ ಗೆ ಮುಂದಾಗಿದ್ದು, ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆ.28, 29 ಮತ್ತು ಅಕ್ಟೋಬರ್ 1 ಮತ್ತು 2ರಂದು ಡ್ರೋನ್ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.

ಇದನ್ನೂ ಓದಿ :-ಕಲೆ ಸಾಹಿತ್ಯಕ್ಕೆ ಒಡೆಯರ್ ಕೊಡುಗೆ ಅಪಾರ ‌ : ಸಿಎಂ ಸಿದ್ದರಾಮಯ್ಯ

136 ಕಿಮೀ ರಸ್ತೆಗೆ ದೀಪಾಲಂಕಾರ:
ಈ ಬಾರಿ ನಗರದ 136 ಕಿ.ಮೀ ವ್ಯಾಪ್ತಿಯ ರಸ್ತೆಗಳು ಹಾಗೂ 118 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ಇದರೊಂದಿಗೆ ನಗರದ ಪ್ರಮುಖ ಕಡೆಗಳಲ್ಲಿ ಎಲ್ಇಡಿ ಬಲ್ಬ್ ಗಳಿಂದ ನಿರ್ಮಿಸಲಾದ 80 ವಿವಿಧ ಪ್ರತಿಕೃತಿಗಳನ್ನು ಇರಿಸಲಾಗಿದೆ. ನಿಗದಿಯಂತೆ ಸೆ.22ರಿಂದ ಅ.2ರವರೆಗೆ ವಿದ್ಯುತ್ ದೀಪಾಲಂಕಾರ ನಡೆಯಲಿದ್ದು, ಇದರೊಂದಿಗೆ ಮುಖ್ಯಮಂತ್ರಿಗಳ ನಿರ್ದೇಶನದಂತೆ 10 ದಿನಗಳು ವಿಸ್ತರಣೆ ಮಾಡಿದ್ದು, ಒಟ್ಟು 21 ದಿನಗಳ ಕಾಲ ವಿದ್ಯುತ್‌ ದೀಪಾಲಂಕಾರ ಇರಲಿದೆ. ಇದಕ್ಕಾಗಿ 300 ಕಿ.ಲೋ ವ್ಯಾಟ್ ಗಳ, 257520 ಯೂನಿಟ್ ವಿದ್ಯುತ್ ಬಳಕೆ ಮಾಡಲಾಗುತ್ತಿದೆ.

ಕೊಲ್ಕತ್ತಾ ಲೈಟಿಂಗ್ ಮೆರಗು
ದಸರಾ ದೀಪಾಲಂಕಾರದ ಆಕರ್ಷಣೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಾರಿ ಕೊಲ್ಕತ್ತಾ ಮಾದರಿ ಲೈಟಿಂಗ್ ಸಹ ಅಳವಡಿಸಲಾಗಿದೆ. ಇದರ ಮೂಲಕವಾಗಿ ನಗರದ ಹಲವು ಕಡೆಗಳಲ್ಲಿ ಬಣ್ಣಬಣ್ಣದ ದೀಪಗಳಿಂದ ಅಲಂಕರಿಸುವ ಮೂಲಕ ದಸರಾ ವಿದ್ಯುತ್ ದೀಪಾಲಂಕಾರದ ಮೆರಗು ಹೆಚ್ಚಿಸಲಾಗಿದೆ.

ಕಂಗೊಳಿಸುತ್ತಿದೆ ಮೈಸೂರು
ದಸರಾ ದೀಪಾಲಂಕಾರದ ಹಿನ್ನೆಲೆಯಲ್ಲಿ ಇಡೀ ಮೈಸೂರು ನಗರ ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿದೆ. ಪ್ರಮುಖವಾಗಿ ಅರಮನೆ ಸುತ್ತಲಿನ ರಸ್ತೆಗಳು ಸೇರಿದಂತೆ ಸಯ್ಯಾಜಿರಾವ್‌ ರಸ್ತೆ, ಇರ್ವಿನ್ ರಸ್ತೆ, ಅಲ್ಬರ್ಟ್‌ ವಿಕ್ಟರ್‌ ರಸ್ತೆ, ಜೆಎಲ್‌ಬಿ ರಸ್ತೆ, ಚಾಮರಾಜ ಜೋಡಿ ರಸ್ತೆ, ಹೊರ ವಲಯದಲ್ಲಿನ ಪ್ರಮುಖ ಹೆದ್ದಾರಿಗಳಿಗೂ ದೀಪಾಲಂಕಾರ ಮಾಡಲಾಗಿದೆ. ನಗರ ವ್ಯಾಪ್ತಿಯಲ್ಲಿರುವ ಪ್ರಮುಖ ವೃತ್ತಗಳಿಗೂ ಆಕರ್ಷಕ ದೀಪಾಲಂಕಾರ ಮಾಡಲಾಗಿದೆ. ಇದಲ್ಲದೆ ದೊಡ್ಡಕೆರೆ ಮೈದಾನ, ಕೆ.ಆರ್‌.ವೃತ್ತ, ಚಾಮರಾಜ ವೃತ್ತ, ಜಯಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ರೈಲ್ವೆ ನಿಲ್ದಾಣ ಸಮೀಪ, ಗನ್‌ಹೌಸ್‌, ಎಲ್‌ಐಸಿ ವೃತ್ತ ಸೇರಿದಂತೆ ವಿವಿಧೆಡೆ ಹಲವು ಕಲಾಕೃತಿಗಳನ್ನು ನಿರ್ಮಿಸಲಾಗಿದೆ.

ಸುರಕ್ಷತೆಗೆ ಆದ್ಯತೆ
ದಸರಾ ವಿದ್ಯುತ್ ದೀಪಾಲಂಕಾರದಲ್ಲಿ ಸೆಸ್ಕ್ ವತಿಯಿಂದ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, ಆ ಮೂಲಕ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಪ್ರಮುಖವಾಗಿ ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳುವುದು, ದೀಪಾಲಂಕಾರದ ಕಂಬಗಳ ಹತ್ತಿರ ನಿಂತು ಫೋಟೋ/ವಿಡಿಯೋ ಶೂಟ್‌ ಮಾಡುವುದನ್ನು ತಪ್ಪಿಸುವುದು, ಮಳೆ ಸಂದರ್ಭದಲ್ಲಿ ವಿದ್ಯುತ್‌/ದೀಪಾಲಂಕಾರದ ಕಂಬಗಳ ಹತ್ತಿರ ಹೋಗದೆ ಎಚ್ಚರವಹಿಸುವುದು ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ವಾಹನ ಸವಾರರು ಈ ಬಗ್ಗೆ ನಿಗಾವಹಿಸಿ ಸುರಕ್ಷಿತವಾಗಿ ಸಂಚರಿಸುವಂತೆ, ವಿದ್ಯುತ್‌ ಸಂಬಂಧಿತ ದೂರು/ದೀಪಾಲಂಕಾರದಿಂದ ತೊಂದರೆ ಆದಲ್ಲಿ 24×7 ಸಹಾಯವಾಣಿ 1912 ಸಂಪರ್ಕಿಸುವಂತೆ ಕೋರಲಾಗಿದೆ.

ಈ ಸಂದರ್ಭದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರ ಪತ್ನಿ ಸುಜಾ ಜಾರ್ಜ್, ಶಾಸಕ ತನ್ವೀರ್ ಸೇಠ್, ಶಾಸಕರು ಹಾಗೂ ಸೆಸ್ಕ್ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಸೇರಿದಂತೆ ಸೆಸ್ಕ್ ಅಧಿಕಾರಿಗಳು ಮತ್ತು ಉಪ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಫೆ.2ರಿಂದ ಬಜೆಟ್ ತಯಾರಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…

1 hour ago

2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೀವಿ : ಸಿಎಂ ವಿಶ್ವಾಸ

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…

1 hour ago

ಅತ್ಯುತ್ತಮ ಸೇವೆ : ರಾಜ್ಯದ 22 ಮಂದಿ ಪೊಲೀಸರು ರಾಷ್ಟ್ರಪತಿ ಪದಕಕ್ಕೆ ಭಾಜನ

ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…

2 hours ago

ಅತಿದೊಡ್ಡ ದರೋಡೆ : ಚೋರ್ಲಾ ಘಾಟ್‌ನಲ್ಲಿ 400 ಕೋಟಿ ನಗದು ಕಂಟೇನರ್‌ಗಳ ಹೈಜಾಕ್‌!

ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…

3 hours ago

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

3 hours ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

4 hours ago