ನಮ್ಮ ಮೈಸೂರ ದಸರಾ 2025

Mysuru dasara | ಬನ್ನಿಮಂಟಪದಲ್ಲಿ ಏರೋ ಶೋ, ಡ್ರೋನ್‌ ಶೋ

ಮೈಸೂರು : ದಸರಾ ಮಹೋತ್ಸವದ ಪ್ರಯುಕ್ತ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆ.೨೭ರಿಂದ ಅ.೨ರವರೆಗೆ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸೆ.೨೭ರಂದು ಸಂಜೆ ೪ಕ್ಕೆ ವೈಮಾನಿಕ ಪ್ರದರ್ಶನ, ಸೆ.೨೮ ಮತ್ತು ೨೯ರಂದು ಸಂಜೆ ೬ಕ್ಕೆ ಡ್ರೋನ್ ಶೋ, ಅ.೧ರಂದು ಸಂಜೆ ೪ಕ್ಕೆ ವೈಮಾನಿಕ ಪ್ರದರ್ಶನ ಮತ್ತು ಪಂಜಿನ ಕವಾಯತು ಪೂರ್ವಾಭ್ಯಾಸ ಕಾರ್ಯಕ್ರಮ, ಅ.೨ರಂದು ಸಂಜೆ ೬ ಗಂಟೆಗೆ ಪಂಜಿನ ಕವಾಯತು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.

ಬನ್ನಿಮಂಟಪ ಮೈದಾನದಲ್ಲಿನ ಆಸನಗಳ ವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಹಿತದೃಷ್ಟಿಯಿಂದ ಕಾರ್ಯಕ್ರಮ ವೀಕ್ಷಣೆಗೆ ಅನುವಾಗುವಂತೆ ಆಯಾ ದಿನಗಳಿಗೆ ಸೀಮಿತವಾಗಿ ಪಾಸ್‌ಗಳನ್ನು ವಿತರಿಸಲಾಗುವುದು.

ಒಳಾಂಗಣಕ್ಕೆ ಪಾಸ್‌ಗಳನ್ನು ಹೊಂದಿರುವವರಿಗೆ ಮಾತ್ರವೇ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಬನ್ನಿಮಂಟಪದ ಮೈದಾನದ ಮಿತ ಸಾಮರ್ಥ್ಯವನ್ನು ಗಮನದಲ್ಲಿರಿಸಿ ಕೊಂಡು ಪಾಸ್ ಇಲ್ಲದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

4 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

6 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

6 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

7 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

8 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

9 hours ago